ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಖಂಡಿಸಿ ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ವೈದ್ಯರಿಂದ ಪ್ರತಿಭಟನೆ ನಡೆಯಲಿದೆ. ಚಾಮರಾಜಪೇಟೆಯ ಐಎಂಎ ಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಕಿದ್ವಾಯಿ, ಜಯದೇವ, ಬೌರಿಂಗ್ ವೈದ್ಯರಿಂದಲೂ ಹೋರಾಟ ನಡೆಯಲಿದೆ. ನಿಮ್ಹಾನ್ಸ್ನಲ್ಲಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಯುತ್ತಿದೆ.
ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೂ ಆಸ್ಪತ್ರೆ ಓಪಿಡಿ ಬಂದ್ ಆಗಿರಲಿದೆ.
ಇಂದು ಯಾವೆಲ್ಲಾ ಸೇವೆಗಳು ಇರುತ್ತವೆ?
- ಎಮರ್ಜೆನ್ಸಿ ಸೇವೆ
- ಮೆಡಿಕಲ್ ಶಾಪ್ಸ್
- ಇನ್ ಪೇಷೆಂಟ್ ಸೇವೆ
- ಹೆರಿಗೆ, ಎಮರ್ಜೆನ್ಸಿ ಸರ್ಜರಿ
ಯಾವೆಲ್ಲ ಸೇವೆಗಳು ಲಭ್ಯವಿಲ್ಲ?
- ಓಪಿಡಿ
- ಡಯಾಲಿಸಿಸ್
- ಕ್ಲಿನಿಕ್ ಸೇವೆ
- ಮಕ್ಕಳ ಓಪಿಡಿ
- ಡೆಂಟಲ್ ಸರ್ವಿಸ್
ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆಗಳು ದೊರೆಯಲಿವೆ. ಆದರೆ, ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ನೀಡಲಿದ್ದಾರೆ. ಮತ್ತೊಂದೆಡೆ, ಖಾಸಗಿ ವೈದ್ಯರು ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಕಚೇರಿ ಎದುರು ಹೋರಾಟ ನಡೆಸಲು ಸಜ್ಜಾಗಿದ್ದಾರೆ.
ಈ ಮಧ್ಯೆ, ಕೊಲ್ಕತ್ತಾದ ಮೃತ ವೈದ್ಯೆಯ ಸಾವಿಗೆ ನ್ಯಾಯ ಒದಗಿಸಬೇಕು. ಹಿಂಸಾಚಾರದ ವಿರುದ್ಧ ವೈದ್ಯರಿಗೆ ರಕ್ಷಣೆ ಒದಗಿಸಬೇಕು. ಆಸ್ಪತ್ರೆಗಳನ್ನು ಸೇಫ್ ಝೋನ್ ಎಂದು ಘೋಷಿಸಬೇಕು ಎಂದು ಐಎಂಎ ಆಗ್ರಹಿಸಿದೆ.