ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ, ನಿವೃತ್ತ ಉಪಪ್ರಾಚಾರ್ಯ ಕೆ. ಬಿ. ಹಿರೇಮಠ ಇವರು ನಿನ್ನೆ ರಾತ್ರಿ ಹೃದಯಾಘಾತದಿಂದ ಲಿಂಗೈಕ್ಯರಾದರೆಂದು ತಿಳಿಸಲು ಅತೀವ ದುಃಖವೆನಿಸುತ್ತದೆ. ಬಸವಾದಿ ಶಿವಶರಣರು ಮೃತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ.
ಶ್ರೀಯುತರ ನಿಧನದಿಂದಾಗಿ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಎಲ್ಲಾ ಅಂಗಸಂಸ್ಥೆಗಳಿಗೆ ಸ್ಥಾನಿಕ ರಜೆ ಘೋಷಿಸಲಾಗಿದೆ. ಮೃತರ ಅಂತ್ಯಕ್ರಿಯೆಯ ಸಮಯ ತಿಳಿಸಲಾಗುವುದು