Ad imageAd image

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ

ratnakar
ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ
WhatsApp Group Join Now
Telegram Group Join Now

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಈ ಕೆಳಕಂಡಂತೆ ಮಾನ್ಯ ಸಚಿವರುಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಉಲ್ಲೇಖಿಸಿರುವ ಸಿದ್ದರಾಮಯ್ಯ, ಸಮಿತಿಯ ಸದಸ್ಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.

ಸಚಿವರ ಸಮಿತಿಯ ಸದಸ್ಯರು

  • ಎಚ್.ಕೆ. ಪಾಟೀಲ – ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು.
  • ಕೃಷ್ಣ ಬೈರೇಗೌಡ – ಕಂದಾಯ ಸಚಿವರು.
  • ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು.
  • ಸಂತೋಷ್ ಎಸ್ ಲಾಡ್ – ಕಾರ್ಮಿಕ ಸಚಿವರು

ಸದರಿ ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಿದೆ ಎಂದು ಆದೇಶದಲ್ಲಿ ಸಿಎಂ ಉಲ್ಲೇಖಿಸಿದ್ದಾರೆ.

WhatsApp Group Join Now
Telegram Group Join Now
Share This Article