Ad imageAd image

ಗಂಭೀರ ಆರೋಪಗಳಿರುವಾಗ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ನ್ಯಾ.ಸಂತೋಷ್‌ ಹೆಗ್ಡೆ

ratnakar
ಗಂಭೀರ ಆರೋಪಗಳಿರುವಾಗ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ನ್ಯಾ.ಸಂತೋಷ್‌ ಹೆಗ್ಡೆ
WhatsApp Group Join Now
Telegram Group Join Now

ಮಂಗಳೂರು: ಸಿಎಂ ಸಿದ್ದರಾಮಯ್ಯರ (Siddaramaiah) ವಿರುದ್ಧ ಇಂತಹ ಗಂಭೀರ ಆರೋಪಗಳಿರುವಾಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ (Santosh Hegde) ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನಲ್ಲಿ (Mangaluru) ಮಾತನಾಡಿದ ಅವರು, ಈ ಹಿಂದೆ ರೈಲ್ವೆ ಸಚಿವರಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅಪಘಾತದ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟಿದ್ದರು. ಇದೇ ರೀತಿ ರಾಜೀನಾಮೆ ಕೊಡಬೇಕೋ ಕೊಡಬೇಡವೋ ಅನ್ನೋದು ಸಿಎಂ‌ ಹಾಗೂ ಅಧಿಕಾರಿಗಳಿಗೆ ಬಿಟ್ಟಿದ್ದು. ಕೊಡದೇ ಇದ್ದರೆ ಕಾನೂನಿನಲ್ಲಿ ಯಾವುದೇ ತಪ್ಪಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈಗ ಅನುಮತಿ ಕೊಟ್ಟಿದ್ದು, ಮುಡಾದ ವಿಚಾರದಲ್ಲಿ ಮಾತ್ರ. ಹೈಕೋರ್ಟ್ ಕೂಡ ಮೇಲ್ನೋಟಕ್ಕೆ ಇದರಲ್ಲಿ ಪುರಾವೆ ಇದೆ ಅಂತಾ ಹೇಳಿದೆ. ಆ ಹಿನ್ನೆಲೆಯಲ್ಲಿ ರಾಜೀನಾಮೆ ಕೊಡಬೇಕು ಅಂತಾ ನನಗೆ ಅನ್ನಿಸುತ್ತಿದೆ. ರಾಜೀನಾಮೆ ಕೊಡಬೇಕು ಅನ್ನೋದು ಈಗ ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.

ಅವರು ಆರೋಪಿಯಲ್ಲ ಅಂತಾ ತೀರ್ಪು ಬಂದರೆ ಮತ್ತೆ ಹುದ್ದೆಗೆ ವಾಪಾಸ್ ಬರಬಹುದು. ಹೈಕೋರ್ಟ್ ತೀರ್ಪು ಬರುವ ಮೊದಲು ನಾನು ತಪ್ಪೇ ಮಾಡಿಲ್ಲ ಅಂತಾ ಹೇಳಿದ್ರು. ಹೀಗಾಗಿ ಸದ್ಯ ಅವರು ಹೇಳಿದ್ದು, ಸರಿ ಇಲ್ಲ ಅಂತಾ ಆಯ್ತಲ್ಲ ಎಂದು ಸಂತೋಷ್‌ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.

WhatsApp Group Join Now
Telegram Group Join Now
Share This Article