Ad imageAd image

ಬೆಂಗಳೂರಿನ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ; ಸ್ಥಳಕ್ಕೆ ಪೊಲೀಸರು ದೌಡು

ratnakar
ಬೆಂಗಳೂರಿನ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ; ಸ್ಥಳಕ್ಕೆ ಪೊಲೀಸರು ದೌಡು
WhatsApp Group Join Now
Telegram Group Join Now

ಬೆಂಗಳೂರು: ಬೆಂಗಳೂರು (Bengaluru) ನಗರದ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ((bomb threat) ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಈ ಮೂಲಕ ಒಂದೇ ದಿನ ಎರಡು ನಗರದ ಎರಡು ಪ್ರತಿಷ್ಠಿತ ಹೋಟೆಲ್​ಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿದ್ದು, ಸಂಪೂರ್ಣ ಹೋಟೆಲ್​ನ್ನು ತಪಾಸಣೆ ಮಾಡಲಾಗುತ್ತಿದೆ.

ಇಂದು(ಶನಿವಾರ) ಮಧ್ಯಾಹ್ನ 12 ಗಂಟೆಯ ಸುಮಾರಿಗೆ ರಾಜಕಾರಣಿಗಳು, ಕ್ರಿಕೆಟರ್​ಗಳು ಆಗಾಗ ವಾಸ್ತವ್ಯ ಹೂಡುವ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಕೂಡಲೇ ಎಚ್ಚೆತ್ತ ಹೋಟೆಲ್​ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೆಲಹೊತ್ತಲ್ಲೇ ಸ್ಥಳಕ್ಕೆ ಬಂದ ಪೊಲೀಸರು, ಬಾಂಬ್ ಸ್ಕ್ವಾಡ್​​ ಪರಿಶೀಲನೆ ನಡೆಸಿದ್ದರು. ಬಳಿಕ ಇದೊಂದು ಹುಸಿ ಬಾಂಬ್​ ಬೆದರಿಕೆ ಎಂಬುದು ಗೊತ್ತಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಅಶೋಕ್ ನಗರದಲ್ಲಿರುವ ಸೈನಿಕ ಶಾಲೆಗೂ ಇಂತಹುದೇ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ. ಇಂತಹ ಘಟನೆಗಳು ಇದೇ ಮೊದಲಲ್ಲ, ಹಲವಾರು ಬಾರಿ ನಡೆದಿವೆ. ಆದರೆ, ಇನ್ನೂವರೆಗೂ ಕಿಡಿಗೇಡಿಗಳು ಮಾತ್ರ ಪತ್ತೆಯಾಗಿಲ್ಲ.

WhatsApp Group Join Now
Telegram Group Join Now
Share This Article