Ad imageAd image

ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ ನಿರ್ಧಾರಕ್ಕೆ ಖಂಡನೆ ಬಿಜೆಪಿ ಪ್ರತಿಭಟನೆ

ratnakar
ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ ನಿರ್ಧಾರಕ್ಕೆ ಖಂಡನೆ ಬಿಜೆಪಿ ಪ್ರತಿಭಟನೆ
WhatsApp Group Join Now
Telegram Group Join Now

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣವನ್ನು (Hubballi Riots Case) ವಾಪಸ್‌ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲೂ ರಾಜ್ಯಬಿಜೆಪಿ ಘಟಕ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra), ವಿಪಕ್ಷ ನಾಯಕ ಆರ್.ಅಶೋಕ್, ಅಶ್ವಥ್ ನಾರಾಯಣ, ಶಾಸಕರಾದ ಎಸ್‌.ಆರ್ ವಿಶ್ವನಾಥ್, ಸಿ.ಕೆ ರಾಮಮೂರ್ತಿ, ರವಿ ಸುಬ್ರಹ್ಮಣ್ಯ, ಸಂಸದ ಕಾರಜೋಳ, ಎಮ್‌ಎಲ್‌ಸಿ ರವಿಕುಮಾರ್ ಮೊದಲಾದ ನಾಯಕರು ಪಾಲ್ಗೊಂಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ಹೊರಹಾಕಿದ್ದಾರೆ.

ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಲು ನಿರ್ಧಾರ ಕೈಗೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ (Cabinet Meeting) ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣ ವಾಪಸ್‌ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ ಬಿಜೆಪಿ (BJP) ಆಕ್ರೋಶ ವ್ಯಕ್ತಪಡಿಸಿದೆ.

WhatsApp Group Join Now
Telegram Group Join Now
Share This Article