Ad imageAd image

ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ

ratnakar
ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ
WhatsApp Group Join Now
Telegram Group Join Now

ಬೆಂಗಳೂರು ಗ್ರಾಮ ಆಡಳಿತಾಧಿಕಾರಿ (ವಿಎಒ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ಸೆ.29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.

ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಕೆಇಎ ವೆಬ್‌ಸೈಟ್ ಲಿಂಕ್ ನಲ್ಲಿ ನಮೂದಿಸಿ, ಫಲಿತಾಂಶವನ್ನು ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಒಟ್ಟು 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅ.27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆಗೆ ಅರ್ಹರಾಗುತ್ತಾರೆ.

ರಾಜ್ಯದ 1,410 ಕೇಂದ್ರಗಳಲ್ಲಿ ಸೆ.29ರಂದು ಪರೀಕ್ಷೆ ನಡೆದಿತ್ತು. ಒಟ್ಟು 5.75 ಲಕ್ಷ ಅಭ್ಯರ್ಥಿಗಳ ಪೈಕಿ 4.53 ಲಕ್ಷ ಮಂದಿ ಪರೀಕ್ಷೆಗೆ ಹಾಜರಾಗಿದ್ದರು . ವಯೋಮಿತಿ ಸಡಿಲಿಕೆಯ ಅನುಕೂಲ ಪಡೆಯುವವರ ಸಲುವಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಅ.26ರಂದು ಕನ್ನಡ ಕಡ್ಡಾಯ ಪರೀಕ್ಷೆ ಇರುತ್ತದೆ. ಅದರ ನಂತರ ಅವರು ಕೂಡ ಅ.27ರಂದು ನಡೆಯುವ ಮುಖ್ಯ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ.

WhatsApp Group Join Now
Telegram Group Join Now
Share This Article