Ad imageAd image
- Advertisement - 

ಇಂದು ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆ

ratnakar
ಇಂದು ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆ
WhatsApp Group Join Now
Telegram Group Join Now

ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ (ಇಸಿ) ಮಂಗಳವಾರ ಪ್ರಕಟಿಸಲಿದೆ. ಇಂದು ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಇದೇ ವೇಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ.

019 ರಲ್ಲಿ ಶಿವಸೇನೆ ಮತ್ತು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷವು (ಎನ್‌ಸಿಪಿ) ಕಾಂಗ್ರೆಸ್‌ ಜೊತೆ ಸೇರಿಕೊಂಡು ಸರ್ಕಾರ ರಚಿಸಿದ್ದವು. ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟ 288ರ ಪೈಕಿ 154 ಸ್ಥಾನಗಳನ್ನು ಗೆದ್ದಿತ್ತು. ನಂತರ ಶಿವಸೇನೆ ಮತ್ತು ಎನ್‌ಸಿಪಿಯಲ್ಲಿ ಒಡಕುಂಟಾಗಿ, ಶಿಂಧೆ ಬಣ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತು. ಈ ಬಾರಿಯ ಚುನಾವಣೆ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ.

WhatsApp Group Join Now
Telegram Group Join Now
Share This Article