Ad imageAd image

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದು ಸರಿಯಾಗಿದೆ: ಮಧು ಬಂಗಾರಪ್ಪ

ratnakar
ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದು ಸರಿಯಾಗಿದೆ: ಮಧು ಬಂಗಾರಪ್ಪ
WhatsApp Group Join Now
Telegram Group Join Now

ಧಾರವಾಡ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ಸರ್ಕಾರದ ನಿರ್ಧಾರ ಸರಿಯಾಗಿದೆ. ಈ ಕೇಸ್‌ನ್ನು ವಾಪಸ್ ಪಡೆದಿದ್ದು ನಮ್ಮ ಸರ್ಕಾರ. ನಮ್ಮ ಸರ್ಕಾರದ ನಿರ್ಧಾರ ಸರಿಯಾಗಿಯೇ ಇದೆ ಎಂದು ನಾವು ಹೇಳಬೇಕು. ಬಿಜೆಪಿಯವರು ಬೇಕಾದರೆ ಪ್ರತಿಭಟನೆ ಮಾಡಿಕೊಳ್ಳಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಸ್ ವಾಪಸ್ ಪಡೆದಿರುವುದಕ್ಕೆ ಬಿಜೆಪಿಯವರು ಪ್ರತಿಭಟನೆ ಮಾಡಲಿ ಬೇಡ ಎಂದವರಾರು? ವಕೀಲರು ಕೋರ್ಟ್ಗೆ ಹೋಗಲಿ. ಕೋರ್ಟ್ ಇರುವುದೇ ವಿಚಾರಣೆ ಮಾಡುವುದಕ್ಕೆ ಎಂದರು. ಮುಡಾ ವಿಚಾರವಾಗಿ ಬಿಜೆಪಿಯವರು ಪಾದಯಾತ್ರೆ ಮಾಡಿದರು. ಇದೇ ಬಿಜೆಪಿಯವರ ಮೇಲೆ ಎಷ್ಟು ಎಫ್‌ಐಆರ್ ಆಗಿದೆ ನೋಡಿಕೊಳ್ಳಲಿ. ಕೇಂದ್ರ ಸಚಿವರುಗಳ ಮೇಲೆ ಶೇ.39 ರಷ್ಟು ಕೇಸ್‌ಗಳು ಇವೆ. ಅವರನ್ನು ಒಳಗೆ ಹಾಕಬೇಕಿತ್ತು. ಅವರಿಂದ ರಾಜೀನಾಮೆ ಕೇಳಬೇಕಿತ್ತು ಎಂದರು.

ಯಾರು ಮುಡಾ ವಿಚಾರವಾಗಿ ಪಾದಯಾತ್ರೆ ಮಾಡಿದ್ದಾರೋ ಅವರು ತಮ್ಮ ಎಲೆಕ್ಷನ್ ಅಫಿಡವಿಟ್ ತೆರೆದು ನೋಡಿಕೊಳ್ಳಲಿ ಎಂದ ಅವರು, ನಮ್ಮ ದೇಶದಲ್ಲಿ ಕಾನೂನು ಇದೆ. ಕಾನೂನು ರಕ್ಷಣೆ ಪಡೆಯುವ ಅಧಿಕಾರ ಎಲ್ಲರಿಗೂ ಇದೆ. ಹುಬ್ಬಳ್ಳಿ ಗಲಭೆ ಇರಲಿ, ಮುಡಾ ಇರಲಿ ಯಾವುದೇ ಇರಲಿ ನಮ್ಮ ದೇಶದಲ್ಲಿ ಕಾನೂನು ಗೆಲ್ಲಬೇಕು. ಅದಕ್ಕೆ ಅವಕಾಶ ಕೊಡಬೇಕು ಹಾಗೂ ಅವಕಾಶ ತೆಗೆದುಕೊಳ್ಳಬೇಕು ಎಂದು ನುಡಿದರು.

ಎಷ್ಟೋ ಕೇಸ್‌ಗಳಲ್ಲಿ ಅಮಾಯಕರನ್ನು ಒಳಗೆ ಹಾಕಲಾಗಿತ್ತು. ಮನೆ ಹುಡುಕಿಕೊಂಡು ಬಂದು ಕೇಸ್ ಹಾಕಿರುವ ಉದಾಹರಣೆ ಕೂಡ ಇದೆ. ಖರ್ಗೆ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದರೆ ಅದು ಅವರ ದೊಡ್ಡ ಗುಣ. ಅದಕ್ಕೆ ಬಿಜೆಪಿಯವರು ಖುಷಿಯಾಗಬೇಕು. ಅದಕ್ಕೆ ಯಾಕೆ ರಾಜೀನಾಮೆ ಕೇಳಬೇಕು? ಪ್ರೇರಣಾ ಟ್ರಸ್ಟ್ಗೆ ದುಡ್ಡು ಬಂದ ಮೇಲೆಯೇ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದರು. ಯಾಕೆ ಮಾಡಿದ್ದು ಎಂದರೆ ಅವರ ಬಳಿ ವಾಷಿಂಗ್ ಮಶಿನ್ ಇದೆ ಅದರಲ್ಲಿ ಹಾಕಿದ ತಕ್ಷಣ ಎಲ್ಲರೂ ಬೆಳ್ಳಗೆ ಆಗುತ್ತಾರೆ ಎಂದು ಲೇವಡಿ ಮಾಡಿದರು.

ಅತಿಥಿ ಶಿಕ್ಷಕರು ಹಾಗೂ ಅಡುಗೆ ಸಹಾಯಕರ ವೇತನ ಹೆಚ್ಚಳ ಮಾಡಬೇಕಿದೆ. ಸಿಎಂ ಜೊತೆ ಮಾತನಾಡಿದ್ದೇನೆ. ಶಿಕ್ಷಕರು ಶ್ರಮಪಟ್ಟು ಕೆಲಸ ಮಾಡುತ್ತಾರೆ. ಅವರ ವೇತನ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುತ್ತೇವೆ. ಬರುವ ಉಪಚುನಾವಣೆಯಲ್ಲಿ ಹೈಕಮಾಂಡ್ ಒಳ್ಳೆಯ ತೀರ್ಮಾನ ತೆಗೆದುಕೊಳ್ಳುತ್ತದೆ. ನಾವು ಹೋಗಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ ಎಂದರು.

WhatsApp Group Join Now
Telegram Group Join Now
Share This Article