ಬೆಳಗಾವಿ: ಮುತ್ಯಾನಟ್ಟಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ವಿವಿಧ ಸಂಘಟನೆಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಮಹಷಿ೯ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕರಾದ ಆಸಿಫ್( ರಾಜು) ಸೇಟ್ ದೀಪ ಬೆಳಗಿಸುವುದರ ಮಾಡುವ ಮೂಲಕ ಉದ್ಘಾಟಿಸಿದರು.
ಮಹರ್ಷಿ ವಾಲ್ಮೀಕಿ ಪುತ್ತಳಗೆ ಪೂಜೆ ಸಲ್ಲಿಸಿದರು ಇದೇ ವೇಳೆ ಮುತ್ಯಾನಟ್ಟಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ವತಿಯಿಂದ ಶಾಸಕರಿಗೆ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಮುತ್ಯಾನಟ್ಟಿ ಗ್ರಾಮದ ಅಭಿವೃದ್ಧಿ ಹಾಗೂ ಶಿಕ್ಷಣ ಕ್ರೀಡೆಗೆ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ಸತೀಶ್ ಜಾರಕಿಹೊಳಿಯವರು ಕುಡಿಯುವ ನೀರಿನ ಯೋಜನೆಯಿಂದಾಗಿ ಗ್ರಾಮದಲ್ಲಿ ಪ್ರತಿ ಮನೆಗೂ ನೀರಿನ ವ್ಯವಸ್ಥೆ ಮಾಡಲಾಗಿದೆ. ರಾಷ್ಟ್ರಮಟ್ಟದ ಕ್ರೀಡಾ ಕೂಟದಲ್ಲಿ ಬಾಲಕಿಯರ ಸಾಧನೆ ಮೆಚ್ಚುವಂತದ್ದು ಎಂದರು.
ಕ್ರೀಡೆಯಲ್ಲಿ ಸಾಧನೆ ಮಾಡಿದ ಬಾಲಕಿಯರಿಗೆ ಸನ್ಮಾನಿಸಿದರು
ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಆಸಿಫ್ (ರಾಜು) ಸೇಟ್ ಕಾಂಗ್ರೆಸ್ ಯುವ ನಾಯಕರಾದ ಆಮನ್ ಸೇಟ್ ಗುಳಪ್ಪ ದಡ್ಡಿ, ಸಿದ್ದಪ್ಪ ಗುರುವ ಸಿದ್ದರಾಯ್ ಗುರುವ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು