Ad imageAd image

ಕಿತ್ತೂರ ಉತ್ಸವ-2024-ಅದ್ಧೂರಿ ಆಚತಣೆಗೆ ಸರ್ವ ಸಿದ್ಧತೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ratnakar
ಕಿತ್ತೂರ ಉತ್ಸವ-2024-ಅದ್ಧೂರಿ ಆಚತಣೆಗೆ ಸರ್ವ ಸಿದ್ಧತೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
WhatsApp Group Join Now
Telegram Group Join Now

ಬೆಳಗಾವಿ: ಕಿತ್ತೂರ‌ ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಕಾರ್ಯಕ್ರಮ ಅದ್ಧೂರಿ ಆಚರಣೆಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಕಿತ್ತೂರು ಉತ್ಸವದ ಅಂಗವಾಗಿ ಮಂಗಳವಾರ (ಅ.22) ಕಿತ್ತೂರಿನಲ್ಲಿ ಉತ್ಸವದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

ಚನ್ನಮ್ಮನ‌ ವಿಜಯೋತ್ಸವದ 200ನೇ ವರ್ಷದ ವರ್ಷಾಚರಣೆ ಹಾಗೂ ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಅದ್ಧೂರಿ ಹಾಗೂ ಅರ್ಥಪೂರ್ಣ ಆಚರಣೆಗೆ ಅನೇಕ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅಕ್ಟೋಬರ್ 23,24 ಮತ್ತು 25 ಮೂರು ದಿನಗಳ ಕಾಲ ಜರುಗಲಿರುವ ಚನ್ನಮ್ಮನ ಉತ್ಸವ ಕಾರ್ಯಕ್ರಮದಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಕಲಾವಿದರುಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಮೂರು ದಿನಗಳ ಕಾಲ ಜರುಗಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಉಪಮುಖ್ಯಂಮತ್ರಿಗಳು, ಸಚಿವರುಗಳು ಆಗಮಿಸುವ ನೀರಿಕ್ಷೆಯಿದೆ ಎಂದರು.

ಕಾರ್ಯಕ್ರಮದ‌ ಮುಖ್ಯ ವೇದಿಕೆ, ಸಮಾನಂತರ ವೇದಿಕೆ, ಆಸನಗಳ ವ್ಯವಸ್ಥೆ, ಮಾಧ್ಯಮ ಕೇಂದ್ರ, ಮೆರವಣಿಗೆ ಮಾರ್ಗ ಸೇರಿದಂತೆ ಇತರೆ ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಉತ್ಸವದ ಅದ್ದೂರಿ ಆಚರಣೆಗಾಗಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯತ್ಸವವನ್ನು ಯಶಸ್ವಿಗೊಳಿಸಲು ಮನವಿ‌ ಮಾಡಿದರು.

ಚನ್ನಮ್ಮನ ಕಿತ್ತೂರ ಶಾಸಕರಾದ ಬಾಬಾಸಾಹೇಬ್ ಪಾಟೀಲ ಅವರು, ಮಾತನಾಡಿ ಉತ್ಸವದ ವಿಜೃಂಭಣೆ ಆಚರಣೆಗೆ ಎಲ್ಲ‌ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿ ಆಯ್.ಎ.ಎಸ್ ಅಧಿಕಾರಿ ದಿನೇಶಕುಮಾರ ಮೀನಾ ಉಪಸ್ಥಿತರಿದ್ದರು.

ಅದ್ದೂರಿ ಉತ್ಸವಕ್ಕೆ ಕ್ಷಣಗಣನೆ:

ಕಿತ್ತೂರು ಉತ್ಸವ, ವಿಜಯೋತ್ಸವದ 200ನೇ ವರ್ಷದ ವರ್ಷಾಚರಣೆಯ ಅಂಗವಾಗಿ ಕಿತ್ತೂರು ಪಟ್ಟಣ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಕಿತ್ತೂರಿನ ರಾಣಿ ಚನ್ನಮ್ಮನ ಪ್ರತಿಮೆ, ವೃತ್ತ, ಮೆರವಣಗೆ ಮಾರ್ಗ, ಕೋಟೆ ಆವರಣ ಸೇರಿದಂತೆ ಇಡೀ ಕಿತ್ತೂರು ಪಟ್ಟಣ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.
ಕಾರ್ಯಕ್ರಮದ‌ ಮುಖ್ಯ ವೇದಿಕೆಯ ಸಿದ್ಧತೆ ಅಂತಿಮ‌ ಹಂತಿದಲ್ಲಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆಗಳು ಆಗದಂತೆ ಎಲ್ಲ ರೀತಿಯ ಸಿದ್ಧತೆಗಳು ಭರದಿಂದ ಸಾಗಿವೆ.

ಬುಧವಾರ(ಅ.23) ಬೆಳಿಗ್ಗೆ ವೀರಜ್ಯೋತಿ ಸ್ವಾಗತ, ಧ್ವಜಾರೋಹಣ, ಮೆರವಣಿಗೆ, ವಸ್ತುಪ್ರದರ್ಶನ ಮಳಿಗೆ ಉದ್ಘಾಟನೆ ಮತ್ತಿತರ ಕಾರ್ಯಕ್ರಮಗಳು ಜರುಗಲಿವೆ. ಸಂಜೆ ಉದ್ಘಾಟನಾ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

WhatsApp Group Join Now
Telegram Group Join Now
Share This Article