Ad imageAd image

ಕಾಂಗ್ರೆಸ್​ 60 ಪರ್ಸೆಂಟ್​ ಲಂಚ ಹೊಡೆದು ರಾಜ್ಯವನ್ನ ಲೂಟಿ ಮಾಡುತ್ತಿದೆ: ಅಶೋಕ್​ ತಿರುಗೇಟು

ratnakar
ಕಾಂಗ್ರೆಸ್​ 60 ಪರ್ಸೆಂಟ್​ ಲಂಚ ಹೊಡೆದು ರಾಜ್ಯವನ್ನ ಲೂಟಿ ಮಾಡುತ್ತಿದೆ: ಅಶೋಕ್​ ತಿರುಗೇಟು
WhatsApp Group Join Now
Telegram Group Join Now

ಬೆಂಗಳೂರು: 40 ಪರ್ಸೆಂಟ್​ ಲಂಚ ಆರೋಪ ಮಾಡಿದ್ದ ಕಾಂಗ್ರೆಸ್​ಗೆ (Congress) ವಿಪಕ್ಷ ನಾಯಕ ಆರ್​ ಅಶೋಕ್ (R Ashok)​ ತಿರುಗೇಟು ನೀಡಿದ್ದಾರೆ. “ನಮ್ಮ ಸರ್ಕಾರದ ಮೇಲೆ 40 ಪರ್ಸೆಂಟ್​ ಲಂಚ ಆರೋಪ ಮಾಡಿದ್ದ ಕಾಂಗ್ರೆಸ್​ ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ಒಳಗೆ 60 ಪರ್ಸೆಂಟ್​​​ ಲಂಚ ಪಡೆದು ರಾಜ್ಯವನ್ನು ಲೂಟಿ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವಿಟ್​ ಮಾಡಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. “40 ಪರ್ಸೆಂಟ್​​ ಸರ್ಕಾರ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್​ ಪಕ್ಷ, 60 ಪರ್ಸೆಂಟ್​ ಲಂಚ ಹೊಡೆದು ರಾಜ್ಯವನ್ನ ಲೂಟಿ ಮಾಡುತ್ತಿದೆ” ಎಂದು ತಿರುಗೇಟು ನೀಡಿದ್ದಾರೆ.

“ನಗರಾಭಿವೃದ್ದಿ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಖಾಸಗಿ ಕಂಪನಿಯೊಂದು ಏಪ್ರಿಲ್ 22 ರಂದು ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರದ 60 ಪರ್ಸೆಂಟ್​ ಲಂಚಾವತಾರದ ಮುಖವಾಡವನ್ನು ಬಯಲು ಮಾಡಿದೆ”.

“ಸಿಎಂ ಸಿದ್ದರಾಮಯ್ಯನವರೇ, ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರ ಸಂಘ ಬರೆದಿರುವ ಪತ್ರದಲ್ಲಿ 700 ಕೋಟಿ ರೂಪಾಯಿ ಲಂಚದ ಬಗ್ಗೆ ಆರೋಪ ಮಾಡಿದ್ದಾರೆ, ಈಗ ಖಾಸಗಿ ಕಂಪನಿಯೊಂದು 60 ಪರ್ಸೆಂಟ್​ ಕಮಿಷನ್ ಆರೋಪ ಮಾಡುತ್ತಿದೆ”.

“ದಿನ ಬೆಳಗಾದರೆ ಒಂದು ಹೊಸ ಹಗರಣದ ಕಥೆ ಕೇಳಿ ಕೇಳಿ ಕನ್ನಡಿಗರು ರೋಸಿ ಹೋಗಿದ್ದಾರೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಇರುವ ಅಲ್ಪ ಸ್ವಲ್ಪ ಗೌರವವನ್ನದರೂ ಉಳಿಸಿಕೊಳ್ಳಿ” ಎಂದು ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
Share This Article