ರಾಮನಗರ: ಚನ್ನಪಟ್ಟಣದಲ್ಲಿ (Channapatna By Election) ಸಿಪಿ ಯೋಗೇಶ್ವರ್ (CP yogeshwar) ಗೆದ್ದು ಬೀಗಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯಿಂದ (BJP) ಕಾಂಗ್ರೆಸ್ಗೆ (Congress) ಜಂಪ್ ಆದರೂ ಜನತೆ ಯೋಗೇಶ್ವರ್ ಕೈಹಿಡಿದಿದ್ದಾರೆ.
ಮೊದಲ 6 ಸುತ್ತಿನಲ್ಲಿ ನಿಖಿಲ್ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ (EVM) ಓಪನ್ ಆಗುತ್ತಿದ್ದಂತೆ ಯೋಗೇಶ್ವರ್ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್ ಕೊನೆಯವರೆಗೂ ಉಳಿಸಿಕೊಂಡು ಬಂದಿದ್ದರು.
ಯೋಗೇಶ್ವರ್ಗೆ 2 ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಎರಡು ಬಾರಿ ಶಾಸಕರಾಗಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಬರಲಿಲ್ಲ ಎಂಬ ಬೇಸರ ಇತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಟೆಯಾಗಿ ತಗೆದುಕೊಂಡಿದ್ದರು.
ಚುನಾವಣೆಗೆ 4 ತಿಂಗಳು ಮೊದಲೇ ಡಿಸಿಎಂ ಡಿಕೆ ಶಿವಕುಮಾರ್ ಜನತಾ ದರ್ಶನ ಆರಂಭಿಸಿದ್ದರು. ಕಳೆದ ಬಾರಿ ಯೋಗೇಶ್ವರ್ಗೆ ಮಿಸ್ ಆಗಿದ್ದ ಅಲ್ಪ ಸಂಖ್ಯಾತ ಮತಗಳು ಈ ಬಾರಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಕೈ ಹಿಡಿದಿದೆ.
ಸಚಿವ ಜಮೀರ್ ಹೇಳಿಕೆ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ಗೆ ಡ್ಯಾಮೇಜ್ ಆಗಿಲ್ಲ. ಆಧುನಿಕ ಭಗೀರಥ ಫೈಟ್ನಲ್ಲಿ ಚನ್ನಪಟ್ಟಣ ಕೆರೆಗೆ ನೀರು ತುಂಬಿಸಿದ ಇಮೇಜ್ನಲ್ಲಿ ಜನರು ಯೋಗೇಶ್ವರ್ ಕೈ ಹಿಡಿದಿದ್ದಾರೆ.