ಬಾಗಲಕೋಟೆ: ಬಸವೇಶ್ವರ ಕಲಾ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ವಿದ್ಯಾರ್ಥಿಗಳ ಪ್ರಾಯೋಗಿಕ ಕಲಿಕೆಗಾಗಿ ಮಾದರಿ ಸುದ್ದಿಗೋಷ್ಠಿಯನ್ನು ಹಮ್ಮಿಕೊಳ್ಳಲಾಯಿತು.
ಮಹಾವಿದ್ಯಾಲಯದ ಆಂತರಿಕ ಪರೀಕ್ಷೆಯ ಕುರಿತು ಪರೀಕ್ಷಾ ಸಮಿತಿ ಪತ್ರಿಕೋದ್ಯಮ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾಹಿತಿ ನೀಡಿದರು. ಬಳಿಕ ಪ್ರಾಚಾರ್ಯರಾದ ಎಸ್.ಆರ್ ಮುಗನೂರಮಠ ಅವರು ಮಾತನಾಡಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣ ಅವಶ್ಯ. ಇಂತಹ ಮಾದರಿ ಸುದ್ದಿಗೋಷ್ಠಿ, ಸುದ್ದಿ ಬರವಣಿಗೆ, ಸಂದರ್ಶನಗಳನ್ನು ಹಮ್ಮಿಕೊಳ್ಳುವುದರಿಂದ ವೃತ್ತಿಪರ ಜೀವನದಲ್ಲಿ ಮೌಲ್ಯಗಳೊಂದಿಗೆ ಯಾವರೀತಿ ಕಾರ್ಯನಿರ್ವಹಿಸಬೇಕೆಂದು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಪದವಿ ಮಟ್ಟದಲ್ಲಿ ಇಂತಹ ಪ್ರಾಯೋಗಿಕ ಕಾರ್ಯಕ್ರಮಗಳನ್ನು ಹಮ್ನಿಕೊಳ್ಳುವುದರ ಮೂಲಕ ಉತ್ತರ ಕರ್ನಾಟಕದ ಭಾಗದಲ್ಲಿಯೂ ಪತ್ರಿಕೋದ್ಯಮ ಕಲಿಕೆಯಲ್ಲಿ ಅವಕಾಶಗಳ ಹೆಚ್ಚಳವಾಗಬೇಕು ಈ ನಿಟ್ಟಿನಲ್ಲಿ ಬಸವೇಶ್ವರ ಕಲಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಸಂತಸದ ಸಂಗತಿಯಾಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮಾದರಿ ಸುದ್ದಿಗೋಷ್ಠಿಯಲ್ಲಿ ಪ್ರಾದ್ಯಾಪಕರುಗಳಾದ ಆರ್. ಎಸ್ ಹಂಚಾಟೆ, ಎಸ್.ವಿ ಕಟ್ಟಿ, ನಟರಾಜ ಇಂಗಳಗಿ, ಎಮ್.ಎಸ್ ಬನ್ನಿ, ಐ.ಬಿ ಚಿಕ್ಕಮಠ, ಮಹಾಂತೇಶ ದೊಡವಾಡ, ಸಂಗಮೇಶ ಬಡಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.