Ad imageAd image

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ಸಿದ್ದರಾಮಯ್ಯ

ratnakar
ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ಸಿದ್ದರಾಮಯ್ಯ
WhatsApp Group Join Now
Telegram Group Join Now

ಬೆಂಗಳೂರು: ಸಂವಿಧಾನ ಅಂಗೀಕಾರವಾಗಿ ಇಂದಿಗೆ 50 ವರ್ಷ ಆಯ್ತು. ಈ ದಿನವನ್ನು ನಾವು ಸಂವಿಧಾನ ದಿನ ಎಂದು ಆಚರಣೆ ಮಾಡುತ್ತಿದ್ದೇವೆ. ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳು ಸಂವಿಧಾನದಡಿಯಲ್ಲೇ ನಡೆಯಬೇಕು. ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲ ಮಕ್ಕಳಿಗೂ ಸಂವಿಧಾನ ಅರ್ಥವಾಗಬೇಕು. ಶಾಲೆಗಳಲ್ಲೇ ಸಂವಿಧಾನ ಪೀಠಿಕೆ ಓದಿಸುತ್ತಿದ್ದೇವೆ ಎಂದರು.

ಸಂವಿಧಾನ ಬದಲಾವಣೆ ಆಗಬಾರದೆಂದು ಹೋರಾಟ ಮಾಡುತ್ತಿದ್ದೇವೆ. ಸಂವಿಧಾನದಲ್ಲಿ 106 ತಿದ್ದುಪಡಿಗಳಾಗಿವೆ. ಸಂವಿಧಾನ ಜಾರಿಗೆ ಬಂದು ಮುಂದಿನ ವರ್ಷ ಜನವರಿಗೆ 75 ವರ್ಷ ತುಂಬಲಿದೆ. ದೀರ್ಘಕಾಲದ ಶಾಂತಿಯಲ್ಲಿರುವ ಸಂವಿಧಾನ ಎಂದರೆ ಅದು ಭಾರತದ ಸಂವಿಧಾನ. ಸಂವಿಧಾನ ಎಷ್ಟೇ ಚೆನ್ನಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇದ್ದರೆ ಒಳ್ಳೆಯದಾಗುತ್ತದೆ. ಕೆಟ್ಟವರ ಕೈಯಲ್ಲಿ ‌ಇದ್ದರೆ ಕೆಟ್ಟದಾಗುತ್ತೆ ಅಂತ ಬಿಆರ್​ ಅಂಬೇಡ್ಕರ್​ ಅವರು ಹೇಳಿದ್ದಾರೆ ಎಂದು ತಿಳಿಸಿದರು.

ಅಸಮಾನತೆ ಹೋಗಲಾಡಿಸದೆ ಹೋದರೆ ಸ್ವಾತಂತ್ರ್ಯ ಸಿಕ್ಕಿದ್ದು ಸಾರ್ಥಕವಾಗಲ್ಲ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ‌ ಸಾಮಾಜಿಕ ಸ್ವಾತಂತ್ರ್ಯ ಕೊಡುವ ಕೆಲಸ ಆಗಬೇಕು. ಸ್ವಾತಂತ್ರ್ಯ, ಸಮಾನತೆ, ನ್ಯಾಯ ಮತ್ತು ಬ್ರಾತೃತ್ವ ಬಗ್ಗೆ ಅಂಬೇಡ್ಕರ್ ಸ್ಪಷ್ಟವಾಗಿ ಹೇಳಿದ್ದಾರೆ. ಪ್ರತಿಯೊಬ್ಬರಿಗೂ ನ್ಯಾಯ ಸಿಗಬೇಕು, ಸಮಾನತೆ ಸಿಗಬೇಕು. ಸಾಮಾಜಿಕ ವ್ಯವಸ್ಥೆಯ ಸಮಾಜ ಕಟ್ಟಬೇಕು ಎಂದರು ಆಶಯ ವ್ಯಕ್ತಪಡಿಸಿದರು.

ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳಿದ್ದರು. ವೀರ್​ ಸಾವರ್ಕರ್, ಆರ್​ಎಸ್​ಎಸ್​ನ ಸರ ಸಂಘಚಾಲಕರಾಗಿದ್ದ ಎಂ ಎಸ್​ ಗೋಲ್ವಾಲ್ಕರ್ ವಿರೋಧ ಮಾಡಿದ್ದರು. ಜಗತ್ತಿನ ಅನೇಕ ರಾಷ್ಟ್ರಗಳ ಸಂವಿಧಾನದ ಅಭ್ಯಾಸ, ಅನುಭವದ ಆಧಾರದ ಮೇಲೆ ಸಂವಿಧಾನ ರಚನೆ ಮಾಡಲಾಗಿದೆ. ಇದು ಲಿಖಿತ ಸಂವಿಧಾನ. ಇದಕ್ಕಿಂತ ಮೊದಲು ಅಲಿಖಿತ ಸಂವಿಧಾನ ಇತ್ತು. ಒಬ್ಬರನ್ನು ಇಬ್ಬರು ದ್ವೇಷಿಸುವ ರೀತಿ ಇತ್ತು ಹೇಳಿದರು.

 

 

WhatsApp Group Join Now
Telegram Group Join Now
Share This Article