Ad imageAd image

ರಾಜ್ಯಾಧ್ಯಕ್ಷ ಹೋಗಿ ಡಿಕೆಶಿ ಬಳಿ 20 ಪತ್ರಕ್ಕೆ ಸಹಿ ಹಾಕಿಸಿಕೊಂಡ ವಿಡಿಯೋ ನನ್ನ ಬಳಿ ಇದೆ: ಯತ್ನಾಳ್ ವಾಗ್ದಾಳಿ

ratnakar
ರಾಜ್ಯಾಧ್ಯಕ್ಷ ಹೋಗಿ ಡಿಕೆಶಿ ಬಳಿ 20 ಪತ್ರಕ್ಕೆ ಸಹಿ ಹಾಕಿಸಿಕೊಂಡ ವಿಡಿಯೋ ನನ್ನ ಬಳಿ ಇದೆ: ಯತ್ನಾಳ್ ವಾಗ್ದಾಳಿ
WhatsApp Group Join Now
Telegram Group Join Now

ವಿಜಯಪುರ: ರಾಜ್ಯಾಧ್ಯಕ್ಷ ಹೋಗಿ ಡಿಕೆಶಿ ಬಳಿ 20 ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದರು ಆ ವಿಡಿಯೋ ನನ್ನ ಬಳಿ ಇದೆ. ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಾಗ್ದಾಳಿ ನಡೆಸಿದರು.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ (ನ.27) ದೆಹಲಿ (Delhi) ಹೈಕಮಾಂಡ್‌ನಿಂದ ಕರೆ ಬಂದಿತ್ತು. ವರಿಷ್ಠರ ಜೊತೆಗೆ ಮಾತನಾಡಿದ್ದೇನೆ. ನಾನು ಒಬ್ಬನೇ ಬರುವುದಿಲ್ಲ. ನನ್ನ ತಂಡ ಸಹಿತವಾಗಿಯೇ ಬಂದು ಎಂದು ಉತ್ತರಿಸಿರುವೆ ಎಂದು ತಿಳಿಸಿದ್ದೇನೆ ಎಂದರು

ಭ್ರಷ್ಟಾಚಾರದ ವಿರುದ್ಧ, ವಕ್ಫ್ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಎಲ್ಲರನ್ನೂ ದೆಹಲಿಗೆ ಕರೆಯಿರಿ ಆಗ ಬಂದು ಕರ್ನಾಟಕದಲ್ಲಿ ಏನು ನಡೆದಿದೆ ಎಂದು ಹೇಳುತ್ತೇವೆ. ಒಬ್ಬರನ್ನು ಕರೆದು ಸಮಾಧಾನ ಮಾಡಲು ಆಗುವುದಿಲ್ಲ. ನಾನು ಯಾವುದಕ್ಕೂ ಹೆದರುವುದಿಲ್ಲ, ಕ್ಷಮಾಪಣೆ ಕೇಳುವುದಿಲ್ಲ ಎಂದರು.

WhatsApp Group Join Now
Telegram Group Join Now
Share This Article