Ad imageAd image

ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿಯ ಸಾಕ್ಷಿಗುಡ್ಡೆ ಗುತ್ತಿಗೆದಾರರ ಬಿಲ್​ ಬಾಕಿ: ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ratnakar
ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿಯ ಸಾಕ್ಷಿಗುಡ್ಡೆ ಗುತ್ತಿಗೆದಾರರ ಬಿಲ್​ ಬಾಕಿ: ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು
WhatsApp Group Join Now
Telegram Group Join Now

ಬೆಂಗಳೂರು: ಶೇ. 60 ರಷ್ಟು ಕಮಿಷನ್​ ನಡೆಯುತ್ತಿದೆ ಎನ್ನುವುದು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ. ದಾಖಲೆ ಸಹಿತ ಆರೋಪ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿರುಗೇಟಿಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಉತ್ತರ ನೀಡಿದ್ದಾರೆ. ಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ಗುತ್ತಿಗೆದಾರರ ಬಿಲ್ ಬಾಕಿ ಮೊತ್ತ ​ಸುದ್ದಿಯನ್ನು ಟ್ವೀಟ್​ ಮಾಡಿರುವ ಅವರು, “ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸಿದ್ದರಾಮಯ್ಯನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ” ಎಂದು ವಾಗ್ದಾಳಿ ಮಾಡಿದ್ದಾರೆ.

ನಿಮ್ಮ ಸರಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ? ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ” ಎಂದು ತಿರುಗೇಟು ನೀಡಿದ್ದಾರೆ.

ಗುತ್ತಿಗೆದಾರರ 32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಸಾಲಸೋಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಬರೆಯುತ್ತಿದ್ದಾರೆ” ಎಂದು ವಾಗ್ದಾಳಿ ಮಾಡಿದರು.

WhatsApp Group Join Now
Telegram Group Join Now
Share This Article