ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಫೈನಲ್

Mar 23, 2024 - 07:59
 38
Google  News Join WhatsApp Join Telegram Live

ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಫೈನಲ್

Panchayat Swaraj Samachar News Desk.

ಲೋಕಸಭಾ ಚುನಾವಣೆಗೆ ಕರ್ನಾಟಕದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಎರಡು ಪಟ್ಟಿಯನ್ನು ಪ್ರಕಟಿಸಿದ್ದು, ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.ಇದೀಗ ಬಾಕಿ ಉಳಿದಿರುವ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಫೈನಲ್ ಆಗಿದ್ದು, ಕೊನೆಯ ಸುತ್ತಿನ ಚರ್ಚೆ ಮಾತ್ರ ಬಾಕಿ ಉಳಿದಿದೆ.

ಬಾಕಿ ಉಳಿದಿದ್ದ ಚಾಮರಾಜನಗರ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರದ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿದ್ದು, ಇಂದು (ಮಾರ್ಚ್ 23) ನಾಲ್ಕು ಕ್ಷೇತ್ರಗಳ ಟಿಕೆಟ್ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ. ಕೋಲಾರದಲ್ಲಿ ಬಣ ಬಡಿದಾಟದಿಂದ ಕಗ್ಗಂಟು ಏರ್ಪಟ್ಟಿದ್ದರಿಂದ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಇದೀಗ ಅಂತಿಮ ಹಂತಕ್ಕೆ ಬಂದಿದೆ ಎಂದು ತಿಳಿದಬಂದಿದೆ.

Google News Join Facebook Live 24/7 Help Desk

Tags: