ಬರ ಪರಿಹಾರ ಬಿಡುಗಡೆಗೆ ಈ ವಾರದಲ್ಲಿ ಕ್ರಮ – ಸುಪ್ರೀಂಗೆ ಕೇಂದ್ರ ಸರ್ಕಾರದ ಭರವಸೆ

Apr 22, 2024 - 19:53
Apr 22, 2024 - 19:55
 34
Google  News Join WhatsApp Join Telegram Live

ಬರ ಪರಿಹಾರ ಬಿಡುಗಡೆಗೆ ಈ ವಾರದಲ್ಲಿ ಕ್ರಮ – ಸುಪ್ರೀಂಗೆ ಕೇಂದ್ರ ಸರ್ಕಾರದ ಭರವಸೆ

Panchayat Swaraj Samachar News Desk.

ನವದೆಹಲಿ: ಬರ ಪರಿಹಾರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ.

ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ‌.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ಚುನಾವಣಾ ಆಯೋಗದ ಜೊತೆಗೆ ಈ ಬಗ್ಗೆ ಚರ್ಚಿಸಿದ ಬರ ಪರಿಹಾರ ಬಿಡುಗಡೆ ಆಯೋಗ ಅನುಮತಿ ನೀಡಿದೆ. ಹೀಗಾಗಿ ಈ ವಾರದೊಳಗೆ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೇಂದ್ರ ಸರ್ಕಾರ ಭರವಸೆ ಬೆನ್ನಲೆ ಮಧ್ಯಪ್ರವೇಶ ಮಾಡಿದ ನ್ಯಾ.ಬಿ.ಆರ್ ಗವಾಯಿ, ಒಕ್ಕೂಟ ವ್ಯವಸ್ಥೆಯಲ್ಲಿ ಇಂತಹ ವಿಷಯಗಳನ್ನು ಸೌರ್ಹಾದಯುತವಾಗಿ ಬಗೆಹರಿಸಿಕೊಳ್ಳಬೇಕು. ಸುಪ್ರೀಂಕೋರ್ಟ್ ತನಕ ಈ ಪ್ರಕರಣ ಬರಬಾರದು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದರು. ಅರ್ಜಿ ವಿಚಾರಣೆಯನ್ನು ಕೋರ್ಟ್‌ ಏ.29ಕ್ಕೆ ಮುಂದೂಡಿದೆ.

ವಿಚಾರಣೆ ಬಳಿಕ ದೆಹಲಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದೆವು. ಇಂದಿನ ವಿಚಾರಣೆಯಲ್ಲಿ ಕೇಂದ್ರ ಸರ್ಕಾರ ಈ ವಾರದಲ್ಲಿ ತಿರ್ಮಾನ ಕೈಗೊಳ್ಳುವ ಭರವಸೆ ನೀಡಿದೆ ರಾಜ್ಯ ಸರ್ಕಾರ ಕೋರ್ಟ್ ಮೂಲಕ ಪರಿಹಾರ ಪಡೆಯುವಂತಾಗಿದೆ. ಇದು ರಾಜ್ಯ ಸರ್ಕಾರದ ಕಾನೂನು ಹೋರಾಟಕ್ಕೆ ಸಂದ ಜಯ ಎಂದರು.

18,172 ಕೋಟಿ ಬರ ಪರಿಹಾರ ಬಿಡುಗಡೆಗೆ ಕೇಳಿದೆ 4663 ಕೋಟಿ ಹಣವನ್ನಾದರೂ ಮೊದಲು ಬಿಡುಗಡೆ ಮಾಡಲಿ ಇದರಿಂದ ರೈತರಿಗೆ ಸಹಾಯವಾಗಲಿದೆ, ರೈತರಿಗೆ ಅನಿವಾರ್ಯತೆ ಇದ್ದಾಗ ಪರಿಹಾರ ನೀಡಬೇಕು ಮುಗಿದ ಮೇಲಲ್ಲ ಕೇಂದ್ರ ಸರ್ಕಾರ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

Google News Join Facebook Live 24/7 Help Desk

Tags: