10 ವರ್ಷ ವಯಸ್ಸಿನ ಅಪ್ರಾಪ್ತೆ ಮೇಲೆ ಅತ್ಯಾಚಾರಗೈದು ಕೊಲೆಗೈದಿರುವ ಪೈಶಾಚಿಕ ಕೃತ್ಯ ನೆರೆಯ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿಗೆ ಸಮೀಪದಲ್ಲಿರುವ ಮಹಾರಾಷ್ಟ್ರದ ಕೊಲ್ಲಾಪುರ ಹೊರವಲಯದ ಶೇಯೇ ಪ್ರದೇಶದಲ್ಲಿ ಘಟನೆ ನಡೆದಿದ್ದು ಅತ್ಯಾಚಾರದ ವೇಳೆ ಬಾಲಕಿ ಚೀರಾಡಿದಕ್ಕೆ ಆಕೆಯನ್ನು ಕೊಲೆಗೈದು ಕಾಮುಕ ಪರಾರಿಯಾಗಿದ್ದ.
ಬಾಲಕಿ ತಾಯಿಯ ನಿಕಟ ಸಂಭಂಧಿಯಿಂದಲೇ ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆಯಾಗಿದೆ. ಕಳೆದ 3 ತಿಂಗಳಿನಿಂದ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಕಾಮುಕ, ಮೃತ ಬಾಲಕಿಯ ಮನೆಯಿಂದ ಕೆಲವೇ ಅಂತರದಲ್ಲಿರುವ ಹೊಲದಲ್ಲಿ ಕೃತ್ಯ ಎಸಗಿದ್ದಾನೆ.
ಅರೆಬೆತ್ತಲೆ ಸ್ಥಿತಿಯಲ್ಲಿ ಬಿದ್ದಿದ್ದ ಬಾಲಕಿ ಶವ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಪ್ರಕರಣ ನಡೆದು ಐದೇ ಗಂಟೆಗಳಲ್ಲಿ ಆರೋಪಿಯನ್ನು ಕೊಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮುಂದೆ ಆರೋಪಿ ದಿನೇಶ್ ಕುಮಾರ್ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಹಾಗೂ ಅಪ್ರಾಪ್ತೆಯ ಪೋಷಕರು ಬಿಹಾರ ಮೂಲದವರೆಂಬ ಮಾಹಿತಿ ಲಭ್ಯವಾಗಿದೆ. ಕೊಲ್ಹಾಪುರದ ಶಿರೋಳಿ MIDC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತ ಬಾಲಕಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.