ಬೆಳಗಾವಿ: ನಗರದ ಬಾಕ್ಸೈಟ್ ರಸ್ತೆಯಲ್ಲಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ರಸ್ತೆಯಲ್ಲಿ ಹೋಗುತ್ತಿರುವ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದ್ದು ಎಪಿಎಂಸಿ ಪೋಲಿಸ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.
ಸ್ಥಳದಲ್ಲಿದ್ದ ಜನರು ತಕ್ಷಣ ಎಪಿಎಂಸಿ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಎಪಿಎಂಸಿ ಪೋಲಿಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಕಾರ್ಯನಿರತರಾಗಿದ್ದರು.