ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಈ ಕೆಳಕಂಡಂತೆ ಮಾನ್ಯ ಸಚಿವರುಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಉಲ್ಲೇಖಿಸಿರುವ ಸಿದ್ದರಾಮಯ್ಯ, ಸಮಿತಿಯ ಸದಸ್ಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.
ಸಚಿವರ ಸಮಿತಿಯ ಸದಸ್ಯರು
- ಎಚ್.ಕೆ. ಪಾಟೀಲ – ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು.
- ಕೃಷ್ಣ ಬೈರೇಗೌಡ – ಕಂದಾಯ ಸಚಿವರು.
- ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು.
- ಸಂತೋಷ್ ಎಸ್ ಲಾಡ್ – ಕಾರ್ಮಿಕ ಸಚಿವರು
ಸದರಿ ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಿದೆ ಎಂದು ಆದೇಶದಲ್ಲಿ ಸಿಎಂ ಉಲ್ಲೇಖಿಸಿದ್ದಾರೆ.