spot_img
spot_img
spot_img
28.1 C
Belagavi
Thursday, September 29, 2022
spot_img

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ರಾ ಮುರುಘಾ ಮಠದ ಶ್ರೀಗಳು..? : ಪೋಕ್ಸೋ ಕಾಯ್ದೆಯಡಿ ದೂರು

spot_img

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಐವರು ವಿರುದ್ಧ ನಜರಾಬಾದ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಅಡಿ ದೂರು ದಾಖಲಾಗಿದೆ.

ಕಳೆದ ಕೆಲವು ವರ್ಷಗಳಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಮೈಸೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರಿನನ್ವಯ ಎಫ್‍ಐಆರ್ ದಾಖಲಿಸಲಾಗಿದೆ.
ಪ್ರಕರಣದಲ್ಲಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದಲ್ಲಿ ಮಠ ನಡೆಸುತ್ತಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್‌ ರಶ್ಮಿ ಎರಡನೇ ಆರೋಪಿಯಾಗಿದ್ದಾರೆ.

ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಮಾಡುತ್ತಿರುವುದಾಗಿ, ಅದಕ್ಕೆ ಉಳಿದ ಆರೋಪಿಗಳು ಸಹಕರಿಸಿರುವುದಾಗಿ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -