ಬೆಂಗಳೂರು: ಎಲ್ಲಾ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಸಂವಿಧಾನ ಹಾಗೂ ಗ್ರಾಮ ಪಂಚಾಯಿತಿಯ 73 ಮತ್ತು 74 ನೇ ತಿದ್ದುಪಡಿ, ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಗಳ ಪ್ರತಿಗಳನ್ನು ಕಳಿಸಿ ಅಲ್ಲಿಯೂ ಸಂವಿಧಾನಬದ್ಧ ಆಡಳಿತ ನಡೆಸುವುದು ನಮ್ಮ ಆಶಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಸ್ಪೂರ್ತಿ ಗ್ರಾಮೀಣ ಮಟ್ಟದಲ್ಲಿ ಆಗಬೇಕೆನ್ನುವುದು ನಮ್ಮ ಉದ್ದೇಶ. ಪ್ರಧಾನಿ ಮೋದಿಯವರು ಸಂವಿಧಾನ ನನಗೆ ಧರ್ಮಗ್ರಂಥ ಎಂದು ಹೇಳಿದ್ದರು.
ಅದನ್ನು ಅಕ್ಷರಶಃ ನಾವೆಲ್ಲರೂ ಪಾಲನೆ ಮಾಡುತ್ತಿದ್ದೇವೆ ಎಂದರು. ಅಧಿಕಾರ ವಿಕೇಂದ್ರೀಕರಣ ಆಗಿದೆ, ಇನ್ನಷ್ಟು ಆಗಬೇಕಿದೆ ಎಂದರು.