ಬೆಂಗಳೂರಿನ ಶಿವಾಜಿನಗರದ ಆಜಾಂ ಮಸೀದಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಮಸೀದಿಗೆ ಬಾಂಬ್ ಇಟ್ಟಿದ್ದಾರೆಂದು ರಾತ್ರಿ 11ಕ್ಕೆ ಅಪರಿಚಿತನೊಬ್ಬ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ತಿಳಿಸಿದ್ದಾನೆ.
ಉಗ್ರರು ಬಾಂಬ್ ಇಟ್ಟಿದ್ದಾರೆಂದು ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು ಮಾಹಿತಿ ತಿಳಿದು ಸ್ಥಳಕ್ಕೆ ಶಿವಾಜಿನಗರ ಪೊಲೀಸರು ದೌಡಾಯಿಸಿದ್ದಾರೆ. ಹಿರಿಯ ಅಧಿಕಾರಿಗಳು ಸಹಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಸೀದಿ ಪರಿಶೀಲನೆ ಬಳಿಕ ಹುಸಿ ಬಾಂಬ್ ಕರೆ ಎಂದು ತಿಳಿದು ನಿಟ್ಟುಸಿರು ಬಿಟ್ಟಿದ್ದಾರೆ. ಕರೆ ಮಾಡಿದ ವ್ಯಕ್ತಿಗಾಗಿ ಶಿವಾಜಿನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...