ಬೆಳಗಾವಿ: ಬಸ್ ವ್ಯವಸ್ಥೆಗಾಗಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ನಿಚ್ಛಣಿಕೆ ಗ್ರಾಮದಲ್ಲಿ ನಡೆದಿದೆ.
ಅಕ್ಷತಾ ಹೂಲಿಕಟ್ಟಿ ಮೃತ ವಿದ್ಯಾರ್ಥಿನಿ. ಗ್ರಾಮದಲ್ಲಿ ಬಸ್ ವವಸ್ಥೆ ಇಲ್ಲದ ಕಾರಣ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು, ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ನಡೆಸಲಾಗಿತ್ತು.
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶಿವನೂರ ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ ಅಕ್ಷತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.