ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.
ಕಲ್ಲು ತೂರಾಟದಿಂದ ಇದರಿಂದ 6 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಘಟನೆಯಲ್ಲಿ 5 ಬೈಕ್ಗಳು, 1 ಕ್ರೂಸರ್, 2 ಗೂಡ್ಸ್ ವಾಹನಗಳಿಗೆ ಹಾನಿಯಾಗಿದೆ. ವಾಹನಗಳ ಗ್ಲಾಸುಗಳು ಪುಡಿಯಾಗಿವೆ.
ಡಿ.26 ರಂದು ವೈಯಕ್ತಿಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಜಗಳವಾಗಿತ್ತು. ಈ ವೇಳೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಎಲ್ಲರಿಗೂ ಎಚ್ಚರಿಕೆ ನೀಡಿ, ಪರಿಸ್ಥಿತಿ ತಿಳಿಗೊಳಿಸಿದ್ದರು.
ಆದರೆ ಇಂದು ಅದೇ ಎರಡು ಗುಂಪಿನವರು ಮತ್ತೆ ಜಗಳ ಮಾಡಿ ಘರ್ಷಣೆಗೆ ಕಾರಣವಾಗಿದ್ದಾರೆ. ಗ್ರಾಮದಲ್ಲಿ ತಾಳಿಕೋಟೆ ಪೊಲೀಸರು ಬೀಡು ಬಿಟ್ಟಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮ ತೆಗೆದುಕೊಂಡಿದ್ದಾರೆ. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.