ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್ ಲೈನ್ಸ್ ರಿಲೀಸ್ ಮಾಡಿದೆ. ಇಂದು ಕೋವಿಡ್ ಬಗ್ಗೆ ಕುರಿತು ಸಭೆ ನಡೆಸಲಾಗಿತ್ತು ಈ ಸಭೆಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಎಲ್ಲಾ ಥಿಯೇಟರ್, ಶಾಲಾ- ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋವಿಡ್ ಸಭೆ ಬಳಿಕ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದೇ ವೇಳೇ ಮಾತನಾಡಿದ ಸಚಿವ ಸುಧಾಕರ್, ಸ್ವಯಂ ಪ್ರೇರಿತವಾಗಿ ಮೂರನೇ ಡೋಸ್ ಲಸಿಕೆಯನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದರು.
ಯಾವುದೇ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧವನ್ನು ಹೇರಿಲ್ಲ, ಆದರೆ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗುವುದು ಅಂತ ಹೇಳಿದರು.
ಶಾಲಾ ಕಾಲೇಜುಗಳ ಕ್ಲಾಸ್ ರೂಮ್ ಒಳಗೆ ಹಾಗೂ ಶಾಲೆಗೆ ಬರುವ ಮುನ್ನ ಕೊಠಡಿ ಬಳಿಯಲ್ಲಿ ಸ್ಯಾನಿಟೈಸರ್ ಇಡಬೇಕು. ಇದಲ್ಲದೇ ಹೊಸ ವರ್ಷದ ಆಚರಣೆ ಗೆ ಒಂದು ಗಂಟೆ ತನಕ ಮಾತ್ರ ಅವಕಾಶ ನೀಡಲಾಗಿದೆ.
ಇನ್ನೂ ಹೊಟೆಲ್‌ನಲ್ಲಿ ಇರೋ ಟೇಬಲ್‌ಗಳಲ್ಲಿ ಮಾತ್ರ ಸರ್ವಿಸ್ ನೀಡಲು ಅವಕಾಶವಿದ್ದು, ಹೆಚ್ಚಿನ ಟೇಬಲ್‌ಗಳನ್ನು ಹಾಕಲು ಅವಕಾಶವಿಲ್ಲ, ಸರ್ವರ್ ಗಳು ಕಡ್ಡಾಯವಾಗಿ ಎರಡು ಡೋಸ್ ಲಸಿಕೆಯನ್ನು ಹಾಕಿಸಿಕೊಂಡಿರಬೇಕು ಅಂತ ಹೇಳಿದರು.