ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಜಮೀರ್ ಕೊಲೆಯಾದ ಯುವಕ. ಕಲಬುರ್ಗಿಯ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಯಾಗಿರುವ ಜಮೀರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹಳೆವೈಷಮ್ಯದದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.