ಬೆಳಗಾವಿ : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಬೆಳಗಾವಿ ರವರ ಸಹಯೋಗದೊಂದಿಗೆ ಬೆಳಗಾವಿಯಲ್ಲಿ ಅಧಿವೇಶನದ ನಿಮಿತ್ತವಾಗಿ 22.12.2022 ರಿಂದ 30.12.2022ರವರೆಗೆ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.
ಈ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಾಗೂ ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಸಮುದಾಯ ಉದ್ಯಮ ನಿಧಿ ವಿತರಣೆ ಸಮಾರಂಭವನ್ನು ದಿನಾಂಕಃ22.12.2022 ಸಾಯಂಕಾಲ 6.00 ಗಂಟೆಗೆ ಸರ್ದಾರ್ ಮೈದಾನದಲ್ಲಿನ ಭವ್ಯ ಸಭಾಂಗಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿರವರು ಉದ್ಘಾಟಿಸಲಿದ್ದು, ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾಗಿರುವ ಮಾನ್ಯ ಡಾ. ಸಿ.ಎನ್. ಅಶ್ವಥ್ ನಾರಾಯಣ್ ರವರು ಉಪಸ್ಥಿತರಿರುತ್ತಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಅತ್ಯಂತ ಪ್ರಮುಖ ಮತ್ತು ಅತ್ಯುತ್ತಮ ಗುಣಮಟ್ಟದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಈ ಮೇಳದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭದಲ್ಲಿ ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಕೊಪ್ಪಳ ಹಾಗೂ ಟಿ.ನರಸೀಪುರ ತಾಲ್ಲೂಕುಗಳ ಸ್ವ-ಸಹಾಯ ಗುಂಪುಗಳಿಗೆ ಸಮುದಾಯ ಉದ್ಯಮ ನಿಧಿಯನ್ನು ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಗೋವಿಂದ ಎಂ, ಕಾರಜೋಳ, ಮಾನ್ಯ ಜಲ ಸಂಪನ್ಮೂಲ (ಭಾರಿ ಮತ್ತು ಮಧ್ಯಮ ನೀರಾವರಿ) ಇಲಾಖೆ ಸಚಿವರು, ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಬೆಳಗಾವಿ, ಹಾಗೂ ಶ್ರೀಮತಿ ಶಶಿಕಲಾ ಅ. ಜೊಲ್ಲೆ ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆ ಸಚಿವರು ಆಗಮಿಸಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅನಿಲ್ ಎಸ್. ಬೆನಕೆ, ಮಾನ್ಯ ಶಾಸಕರು (ವಿಧಾನಸಭೆ) ಬೆಳಗಾವಿ, ಉತ್ತರರವರು ವಹಿಸಲಿದ್ದಾರೆ ಎಂದು ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕರಾದ ಡಾ. ರಾಗಪಿಯಾ.ಆರ್ ತಿಳಿಸಿದ್ದಾರೆ.
150 ಮಳಿಗೆ ಸ್ಥಾಪನೆ; ಪ್ರವೇಶ ಉಚಿತ:
ಈ ಮೇಳದಲ್ಲಿ 150 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ದಿನಾಂಕಃ22.12.2022 ರಿಂದ ದಿನಾಂಕ: 30.12.2022ರವರೆಗೆ ಉಚಿತ ಪ್ರವೇಶವಿದ್ದು, ಬೆಳಿಗ್ಗೆ 10.30 ಯಿಂದ ರಾತ್ರಿ 9.30ರವರೆಗೆ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕರಾದ ಡಾ. ರಾಗಪಿಯಾ.ಆರ್ ತಿಳಿಸಿದ್ದಾರೆ.
ಈ ಮಳಿಗೆಯಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳಾದ ಈ ಮೇಳದಲ್ಲಿ ಕರಕುಶಲ ವಸ್ತುಗಳಾದ ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ಮಸಾಲಾ ಉತ್ಪನ್ನಗಳು, ಸಿರಿ ಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಉಪ್ಪಿನಕಾಯಿ, ಖಾದಿ ಉತ್ಪನ್ನಗಳು, ಬಾಳೆ ನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಉತ್ಪನ್ನಗಳು ಮುಂತಾದವುಗಳು ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿದೆ.
ಈ ಮೇಳದ ಮೈದಾನದಲ್ಲಿ ಮಕ್ಕಳಿಗೆ ಆಟಿಕೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಉತ್ತರ ಕರ್ನಾಟಕ ಸೇರಿದಂತೆ ಹೆಸರುವಾಸಿ ಆಹಾರಗಳ 10 ಮಳಿಗೆಗಳು ಸ್ಥಾಪಿಸಲಾಗಿದೆ. ಪ್ರಮುಖವಾಗಿ, ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದ ಚುರುಮರಿ ಮಂಡಕ್ಕಿ, ಜೋಳದ ಖಡಕ್ ರೊಟ್ಟಿ ಸೇರಿದಂತೆ ಹೋಳಿಗೆ, ನೀರ್‍ದೋಸೆ ಮುಂತಾದ ಖಾದ್ಯಗಳು ದೊರೆಯಲಿವೆ.
25 ರಂದು ಅರ್ಜುನ ಜನ್ಯ-ಶಮಿತಾ ಮಲ್ನಾಡ ಸಂಗೀತ ಸಂಜೆ:
ಖ್ಯಾತ ಸಂಗೀತ ನಿರ್ದೇಶಕರಾಗಿರುವ ಶ್ರೀ ಅರ್ಜುನ್ ಜನ್ಯ, ಗಾಯಕಿಯರಾದ ಡಾ.ಶಮಿತಾ ಮಲ್ನಾಡ್ ಹಾಗೂ ತಂಡದವರಿಂದ ದಿನಾಂಕಃ25.12.2022 ರಂದು ಸಂಜೆ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿರುತ್ತದೆ ಹಾಗೂ ಪ್ರತೀ ದಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಒಂದು ಮೇಳದಲ್ಲಿ ಪ್ರಮುಖವಾಗಿ ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುತ್ತಿರುವುದರಿಂದ ಹೆಚ್ಚು ಹೆಚ್ಚು ಸಾರ್ವಜನಿಕರು ಈ ಮೇಳದ ಸದುಪಯೋಗವನ್ನು ಪಡೆದುಕೊಂಡು ಸ್ವ-ಸಹಾಯ ಗುಂಪಿನ ಮಹಿಳೆಯರ ಆರ್ಥಿಕ ಸಬಲತೆಗೆ ಬೆಂಬಲಿಸಲು ಕೈಜೋಡಿಸಬೇಕೆಂದು ಕೋರಿದೆ.
ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಸಮುದಾಯ ಉದ್ಯಮ ನಿಧಿ ವಿತರಣೆ ಪ್ರಮುಖವಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರನ್ನು ಉದ್ಯಮದಾರರನ್ನಾಗಿ ಬೆಳೆಸುವಲ್ಲಿ ಭಾರತ ಸರ್ಕಾರದ ನೆರವಿನಿಂದ ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲ್ಲೂಕು ಹಾಗೂ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕುಗಳಲ್ಲಿ 4 ವರ್ಷಗಳ ಆರಂಭಿಕ ಗ್ರಾಮೀಣ ಉದ್ಯಮ ಯೋಜನೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಸಾಂಕೇತಿಕವಾಗಿ ಚೆಕ್ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ.
ಮೊದಲ ವರ್ಷದಲ್ಲಿ, 278 ವ್ಯವಹಾರ ಯೋಜನೆಯನ್ನು ಸಿದ್ದಪಡಿಸಲಾಗಿದೆ ಮತ್ತು ಹಣವನ್ನು ಬಿಡುಗಡೆ ಮಾಡಲಾಗುವುದು. ಫಲಾನುಭವಿಗಳಿಗೆ ಒಟ್ಟು ರೂ.1.00 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಮತ್ತು ರಾಮನಗರ ಜಿಲ್ಲೆಯ ರಾಮನಗರ ತಾಲ್ಲೂಕಿನಲ್ಲಿ ಕ್ರಮವಾಗಿ ಕಾರ್ಯಕ್ರಮದ ಅನುಷ್ಠಾನವನ್ನು ಪ್ರಾರಂಭಿಸಲು ಪ್ರಾಜೆಕ್ಟ್ ಇಂಪ್ಲಿಮೆಂಟಿಂಗ್ ಏಜೆನ್ಸಿ (PI: SVSS) ಬೆಳಗಾವಿ) ಗೆ ರೂ.50.00 ಲಕ್ಷ ಬಿಡುಗಡೆ ಮಾಡಲಾಗುತ್ತಿದೆ.
ಸಂಜೀವಿನಿ-ಕೆಎಸ್‍ಆರ್‍ಎಲ್‍ಪಿಎಸ್ ಸಂಸ್ಥೆಯು ಈ ಕಾರ್ಯಕ್ರಮದಲ್ಲಿ ಹೊಸ ತಾಲ್ಲೂಕುಗಳಿಗೆ NIMSMSE ಹೈದರಾಬಾದ್ ಮತ್ತು SVSSS ಬೆಳಗಾವಿಯೊಂದಿಗೆ ತಾಂತ್ರಿಕ ಬೆಂಬಲದ ಒಡಂಬಡಿಕೆಗೆ ಈ ಸಹಿ ಮಾಡಲಾಗುವುದು ಎಂದು ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕರಾದ ಡಾ. ರಾಗಪಿಯಾ.ಆರ್ ತಿಳಿಸಿದ್ದಾರೆ.