ವಿಜಯಪುರ: ಆನಾರೋಗ್ಯದಿಂದ ಬಳಲುತ್ತಿರುವ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಆಶ್ರಮದ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಬಳಿ ಸೇರಿದ ಅಪಾರ ಸಂಖ್ಯೆಯ ಭಕ್ತರು ಶ್ರೀಗಳು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದ್ದು, ಶ್ರೀಗಳ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಭಕ್ತರು ಪಟ್ಟು ಹಿಡಿದಿದ್ದಾರೆ.
ಸಿದ್ದೇಶ್ವರ ಶ್ರೀಗಳಿಗೆ ಮಠದಲ್ಲಿಯೇ ಚಿಕಿತ್ಸೆ ಮುಂದುವರೆದಿದ್ದು, ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.
ಸಿದ್ಧೇಶ್ವರ ಶ್ರೀಗಳ ದರ್ಶನಕ್ಕೆ ನಾಡಿನ ಗಣ್ಯರು, ಮಠಾಧೀಶರು ಹಾಗೂ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡತೊಡಗಿದ್ದಾರೆ. ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ