ಚಿತ್ರದುರ್ಗ: ಪ್ರೀತಿ ತಿರಸ್ಕರಿಸಿದ್ದಕ್ಕೆ ಪಾಗಲ್ ಪ್ರೇಮಿ ತನ್ನ ಪ್ರೇಯಸಿಯ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಚಿತ್ರದುರ್ಗ ತಾಲೂಕಿನ ಹುಲ್ಲೂರು ನಿವಾಸಿ ಅರ್ಪಿತಾ(19) ಹತ್ಯೆಯಾದ ಯುವತಿ. ಆರೋಪಿ ಅಜಯ್ ಅಕ್ಟೋಬರ್ 3ರಂದು ಆಟೋದಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಹಲ್ಲೆ ನಡೆಸಿ ಬಳಿಕ ಆಸ್ಪತ್ರೆಗೆ ಅಡ್ಮಿಟ್ ಮಾಡಿ ಎಸ್ಕೇಪ್ ಆಗಿದ್ದ. ತಲೆಗೆ ಪೆಟ್ಟು ಹಿನ್ನೆಲೆ ಬ್ರೈನ್ ಡೆಡ್‌ನಿಂದಾಗಿ ಯುವತಿ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಿಸದೆ ನಿನ್ನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಕೊನೆಯುಸಿರೆಳಿದಿದ್ದಾಳೆ. ಹುಲ್ಲೂರು ಗ್ರಾಮದ ಚಾಲಕ ಅಜಯ್ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ.
ಆರೋಪಿ ಅಜಯ್ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಅಜಯ್ ಯುವತಿಯನ್ನು ಅಪಹರಿಸಿ, ಗ್ರಾಮದ ಹೊರವಲಯಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಹಲ್ಲೆ ಮಾಡಿ ಬಳಿಕ ಆಸ್ಪತ್ರೆಗೆ ದಾಖಲಿಸಿದ್ದಾನೆ ಎನ್ನಲಾಗಿದೆ. ಯುವತಿ ಮೃತಪಟ್ಟಿದ್ದು ಯುವತಿ ಪೋಷಕರು ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿ ಅಜಯ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.