ಪಣಜಿ: ಗೋವಾಕ್ಕೆ ಕ್ರಿಸ್ಮಸ್ ಪಾರ್ಟಿ ಮಾಡಲು ಸ್ನೇಹಿತರ ಜೊತೆ ತೆರಳಿದ್ದ 18 ವರ್ಷದ ವಿದ್ಯಾರ್ಥಿನಿ ಮೇಲೆ ಬಸ್ ಚಾಲಕನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಮುಂಬೈ ಮೂಲದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಸ್‌ನಲ್ಲಿ ಈ ಘಟನೆ ನಡೆದಿದೆ.
ಸಂತ್ರಸ್ತೆ 14 ಜನ ಸ್ನೇಹಿತರ ಜತೆಗೂಡಿ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ಸಂದರ್ಭದಲ್ಲಿ ಆಕೆಯ ಸ್ನೇಹಿತೆಯರು ಮದ್ಯಪಾನ ಮಾಡಲು ಆರಂಭಿಸಿದ್ದರು.
ಇದರಿಂದ ಕಸಿವಿಸಿಗೊಂಡ ವಿದ್ಯಾರ್ಥಿನಿ ಬಸ್ಗೆ ವಾಪಸ್ ಬಂದಿದ್ದಾಳೆ. ಈ ಸಂದರ್ಭದಲ್ಲಿ ಘಟನೆ ನಡೆದಿದೆ.
ಈ ಸ್ನೇಹಿತರು ಬಸ್ ಅನ್ನು ಬಾಡಿಗೆಗೆ ಪಡೆದಿದ್ದರು. ಆರೋಪಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.