spot_img
spot_img
spot_img
18 C
Belagavi
Thursday, September 29, 2022
spot_img

ದೇವರ ಪ್ರಸಾದ ತರಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ

spot_img

ರಾಮನಗರ: ಪತಿ ದೇವರ ಪ್ರಸಾದ ತರಲಿಲ್ಲ ಎಂಬ ಕಾರಣಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ಜರುಗಿದೆ.ನಗರದ ವಿವೇಕಾನಂದನಗರ ಬಡಾವಣೆಯ ನಿವಾಸಿ ಶಿವನಂಜು ಪತ್ನಿ ಶ್ವೇತಾ (27) ಮೃತರು.

ವಿವೇಕಾನಂದ ನಗರ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಗಂಡ ಶಿವನಂಜು ಪುತ್ರನೊಂದಿಗೆ ಸೋಮವಾರ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಕೆ ತೀರಿಸಲು ಹೋಗಿದ್ದರು.

ಆತ ದೇವರ ಪ್ರಸಾದ ತರಲಿಲ್ಲ ಎಂಬ ಕಾರಣಕ್ಕೆ ಶ್ವೇತಾ ಜಗಳವಾಡಿ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತಿ, ಮೂವರು ಮಕ್ಕಳನ್ನು ಅಗಲಿದ್ದಾರೆ. ಈ ಕುರಿತು ಐಜೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -