ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಗುಂಪು ಘರ್ಷಣೆಯಾಗಿದ್ದು, ಈ ವೇಳೆ ಓರ್ವ ಯುವಕನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.
ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ತಳ್ಳಿದರು ಎಂಬ ಕಾರಣಕ್ಕೆ ಯುವಕರ ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಅದು ವಿಕೋಪಕ್ಕೆ ತಿರಗುಗೆ ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಈ ಗಲಾಟೆ ಮಧ್ಯೆ ದುಷ್ಕರ್ಮಿಗಳು ಚೇತನ ಹಡಪದ ಎಂಬ ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.
ಇನ್ನು ಗಲಾಟೆಯಲ್ಲಿ ಅಶೋಕ ಸಿಂಧೂರೆ, ವಿಕಾಸ ಸುಣಗಾರ ಎನ್ನುವವರು ಗಾಯಗೊಂಡಿದ್ದಾರೆ.ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.