ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.
ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ.
ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ
ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಪೋಷಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ ಮನೆಯಲ್ಲಿ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.