Ad imageAd image

ಯೋಗಿಶ್ವರ ಕೈ ಹಿಡಿದ ಚನ್ನಪಟ್ಟಣ, ಮತ್ತೆ ಸೋತ ಅಭಿಮನ್ಯು

ratnakar
ಯೋಗಿಶ್ವರ ಕೈ ಹಿಡಿದ ಚನ್ನಪಟ್ಟಣ, ಮತ್ತೆ ಸೋತ ಅಭಿಮನ್ಯು
WhatsApp Group Join Now
Telegram Group Join Now

ರಾಮನಗರ: ಚನ್ನಪಟ್ಟಣದಲ್ಲಿ (Channapatna By Election) ಸಿಪಿ ಯೋಗೇಶ್ವರ್‌ (CP yogeshwar) ಗೆದ್ದು ಬೀಗಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯಿಂದ (BJP) ಕಾಂಗ್ರೆಸ್‌ಗೆ (Congress) ಜಂಪ್‌ ಆದರೂ ಜನತೆ ಯೋಗೇಶ್ವರ್‌ ಕೈಹಿಡಿದಿದ್ದಾರೆ.

ಮೊದಲ 6 ಸುತ್ತಿನಲ್ಲಿ ನಿಖಿಲ್‌ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ (EVM) ಓಪನ್‌ ಆಗುತ್ತಿದ್ದಂತೆ ಯೋಗೇಶ್ವರ್‌ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್‌ ಕೊನೆಯವರೆಗೂ ಉಳಿಸಿಕೊಂಡು ಬಂದಿದ್ದರು.

ಯೋಗೇಶ್ವರ್‌ಗೆ 2 ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಎರಡು ಬಾರಿ ಶಾಸಕರಾಗಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಬರಲಿಲ್ಲ ಎಂಬ ಬೇಸರ ಇತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಟೆಯಾಗಿ ತಗೆದುಕೊಂಡಿದ್ದರು.

ಚುನಾವಣೆಗೆ 4 ತಿಂಗಳು ಮೊದಲೇ ಡಿಸಿಎಂ ಡಿಕೆ ಶಿವಕುಮಾರ್‌ ಜನತಾ ದರ್ಶನ ಆರಂಭಿಸಿದ್ದರು. ಕಳೆದ ಬಾರಿ ಯೋಗೇಶ್ವರ್‌ಗೆ ಮಿಸ್ ಆಗಿದ್ದ ಅಲ್ಪ ಸಂಖ್ಯಾತ ಮತಗಳು ಈ ಬಾರಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಕೈ ಹಿಡಿದಿದೆ.

ಸಚಿವ ಜಮೀರ್ ಹೇಳಿಕೆ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ಗೆ ಡ್ಯಾಮೇಜ್ ಆಗಿಲ್ಲ. ಆಧುನಿಕ ಭಗೀರಥ ಫೈಟ್‌ನಲ್ಲಿ ಚನ್ನಪಟ್ಟಣ ಕೆರೆಗೆ ನೀರು ತುಂಬಿಸಿದ ಇಮೇಜ್‌ನಲ್ಲಿ ಜನರು ಯೋಗೇಶ್ವರ್‌ ಕೈ ಹಿಡಿದಿದ್ದಾರೆ.

WhatsApp Group Join Now
Telegram Group Join Now
Share This Article