ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ರಾಜ್ಯದ 75 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಎಇಇ ಗವಿರಂಗಪ್ಪ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರೀಶೀಲನೆ ನಡೆಸುತ್ತಿದ್ದಾರೆ.
ದಾಳಿ ವೇಳೆ, ಮನೆಯಲ್ಲಿ ಚಿನ್ನದ ಗಟ್ಟಿ ಮತ್ತು 750 ಗ್ರಾಂ ಚಿನ್ನಾಭರಣ, 900 ಗ್ರಾಂ ಬೆಳ್ಳಿ, 2.74 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.
ಅಧಿಕಾರಿಗಳು ದಾಳಿ ಮುಂದುವರಿಸಿದ್ದು, ನಾಳೆವರೆಗೂ ಎಸಿಬಿ ದಾಳಿ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಚಿಕ್ಕಮಗಳೂರು ಮತ್ತು ಉಡುಪಿ ವಿಭಾಗದ ಎಸಿಬಿ ಅಧಿಕಾರಿಗಳಿಂದ ದಾಖಲೆಗಳ ಪರೀಶೀಲನೆ ನಡೆಯುತ್ತಿದೆ.