ಬೆಳಗಾವಿ: ತಾಲೂಕಿನ ಕಾಕತಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಎರಡು ಲಾರಿ, ಕಾರು ಮಧ್ಯೆ ಭೀಕರ ಅಪಘಾತವಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಶಿವಾಪೂರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕಾಗಮಿಸಿದ ಕಾಕತಿ ಪೊಲೀಸರು ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.