Ad imageAd image

ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬ ಗಾದೆ ಮಾತು ಸಿಎಂಗೆ ಅನ್ವಯ- ವಿಜಯೇಂದ್ರ

ratnakar
ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬ ಗಾದೆ ಮಾತು ಸಿಎಂಗೆ ಅನ್ವಯ- ವಿಜಯೇಂದ್ರ
WhatsApp Group Join Now
Telegram Group Join Now

ಬೆಂಗಳೂರು: ಕೆಟ್ಟ ಮೇಲೆ ಬುದ್ಧಿ ಬಂತು ಎಂಬ ಗಾದೆ ಮಾತು ಸಿಎಂಗೆ (CM Siddaramaiah) ಅನ್ವಯವಾಗುತ್ತದೆ ಎಂದು ಮುಡಾ ಪ್ರಕರಣ (MUDA Scam) ಸಂಬಂಧ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಮುಡಾ ಪ್ರಕರಣ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ (Parvathi Siddaramaiah) ಸೈಟ್ ವಾಪಸ್ಸು ಕೊಡುವುದಾಗಿ ತಿಳಿಸಿದ ಮೇಲೆ ತಮ್ಮ ಎಕ್ಸ್ (X) ಖಾತೆಯಲ್ಲಿ ಟ್ವೀಟ್ ಹಾಕಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯರಿಗೆ ರಾಜೀನಾಮೆಯೊಂದೇ ಉಳಿದಿರುವ ದಾರಿ. ‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬ ಗಾದೆ ಮಾತು ಮುಖ್ಯಮಂತ್ರಿಗಳಿಗೆ ಅನ್ವಯಿಸುತ್ತಿದೆ. ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ? 62 ಕೋಟಿ ಕೊಟ್ಟರೆ ನಿವೇಶನಗಳನ್ನು ಹಿಂದಿರುಗಿಸುತ್ತೇನೆ ಎಂದು ಅಂದು ಸಿಎಂ ಆರ್ಭಟಿಸಿದ್ದರು. ಮಾನ್ಯ ಸಿದ್ದರಾಮಯ್ಯನವರು ಇಂದು ಬೇಷರತ್ತಾಗಿ ಅವರ ಪತ್ನಿಯವರಿಂದ ನಿವೇಶನ ಹಿಂದಿರುಗಿಸುವ ನಿರ್ಧಾರ ಪ್ರಕಟಿಸಿದ್ದಾರೆ ಎಂದರು.

ಬಿಜೆಪಿ (BJP) ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದರು. ನಿಮಗೆ ದೊರೆತ 14 ಅಕ್ರಮ ನಿವೇಶನಗಳು 5000 ಸಾವಿರಕ್ಕೂ ಹೆಚ್ಚು ನಿವೇಶನಗಳ ಲೂಟಿಕೋರತನಕ್ಕೆ ರಕ್ಷಣೆಯಾಗಿ ನಿಂತಿದೆ ಎಂದು ಆರೋಪಿಸಿದ್ದೇವು. ಆರೋಪಿಸಿ ನಾವು ನಡೆಸಿದ ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯ ಸಮಾವೇಶ ಆಯೋಜಿಸಿ ಭಂಡತನದ ಸಮರ್ಥನೆಗಿಳಿದಿದ್ದರು. ಸಾಮಾಜಿಕ ಕಾರ್ಯಕರ್ತರ ನ್ಯಾಯಾಲಯದ ಹೋರಾಟಕ್ಕೆ ಅಸ್ತು ಎಂದ ಘನತೆವೆತ್ತ ರಾಜ್ಯಪಾಲರನ್ನು ಅವಹೇಳನ ಮಾಡಿದ್ದರು. ಅವರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಹೋರಾಟ ಮಾಡಿದರು ಎಂದು ಆಗ್ರಹಿಸಿದರು.

 

WhatsApp Group Join Now
Telegram Group Join Now
Share This Article