ನವದೆಹಲಿ: ಸೂರ್ಯನ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಉಡಾವಣೆ ಮಾಡಿರುವ ಆದಿತ್ಯ ಎಲ್1 ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ.
ಯಶಸ್ವಿ ಕಾರ್ಯಾಚರಣೆಯ ನಂತರ, ಆದಿತ್ಯ ನೌಕೆಯು ಈಗ 296 ಕಿಮೀ x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣೆ ನಡೆಸುತ್ತಿದೆ. ಮುಂದಿನ ಕಾರ್ಯಾಚರಣೆಯನ್ನು ಸೆಪ್ಟೆಂಬರ್ 15 ರಂದು ಮುಂಜಾನೆ 2 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.