ಇಸ್ರೋದ ಮಹತ್ವಾಕಾಂಕ್ಷಿ ಆದಿತ್ಯ ಎಲ್-1 ನೌಕೆ ಉಡಾವಣೆ ಯಶಸ್ವಿಯಾಗಿದೆ. 4ನೇ ಹಂತದಲ್ಲೂ ನೌಕೆ-ರಾಕೆಟ್ ಬೇರ್ಪಡುವ ಕಾರ್ಯ ಯಶಸ್ವಿಯಾಗಿದೆ. ಆದಿತ್ಯ ಎಲ್-1 ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ಅಭಿನಂದಿಸಿದರು.
ಉಪಗ್ರಹವನ್ನು ಹೊತ್ತ PSLV-XLC57 ರಾಕೆಟ್ ನಿಗದಿತ ಕಕ್ಷೆಯಲ್ಲಿ ಸಂಚರಿಸುತ್ತಿದೆ. ಆದಿತ್ಯ ಎಲ್-1 ನೌಕೆ ಒಟ್ಟು 15 ಲಕ್ಷ ಕಿ.ಮೀ. ದೂರ ಸಂಚರಿಸಲಿದ್ದು, ನಿಗದಿತ ಸ್ಥಳಕ್ಕೆ ತಲುಪಲು ನಾಲ್ಕು ತಿಂಗಳ ಕಾಲ ಸಮಯ ಬೇಕು. ಈ ಆದಿತ್ಯ ಎಲ್ 1 ಸೂರ್ಯನ ಮೇಲ್ಮೈ, ಸೂರ್ಯನ ಕಿರಣ, ತಾಪಮಾನ, ಸೌರಜ್ವಾಲೆ, ಸೂರ್ಯನ ಸುತ್ತಲಿನ ವಾತಾವರಣ ಅಧ್ಯಯನ ಮಾಡಲಿದೆ.