ನವದೆಹಲಿ: ಇಂದಿನಿಂದ 5 ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದೆ. ಚಂದ್ರಯಾನ-3 ಯಶಸ್ವಿ ಬಳಿಕ ಭಾರತ ವಿಶ್ವದ ಗಮನ ಸೆಳೆದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಸಂಸತ್ ಭವನದ ಬಳಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಂದ್ರನ ಅಂಗಳದಲ್ಲಿ ಭಾರತದ ರಾಷ್ಟ್ರಧ್ವಜ ಹಾರುತ್ತಿದೆ. ಚಂದ್ರಯಾನ-3 ನಮ್ಮ ತಿರಂಗವನ್ನು ಎತ್ತಿ ಹಿಡಿದಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ ಎಂದರು.
ಜಗತ್ತು, ಅಂತಹ ಸಾಧನೆಯನ್ನು ಮಾಡಿದಾಗ, ಅದನ್ನು ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಜೋಡಿಸುವ ಮೂಲಕ ನೋಡಲಾಗುತ್ತದೆ. ಈ ಸಾಧನೆಯಿಂದ ಹಲವು ಅವಕಾಶಗಳು ಭಾರತದ ಬಾಗಿಲುಗಳನ್ನ ತಟ್ಟುತ್ತವೆ. ಇಸ್ರೋ ವಿಜ್ಞಾನಿಗಳ ಸಾಧನೆ ಎಲ್ಲರಿಗೂ ಸ್ಫೂರ್ತಿ ಎಂದರು.