Ad imageAd image

ಆಗಸ್ಟ್ 22 ರಿಂದ 31 ರವರೆಗೆ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ

ratnakar
ಆಗಸ್ಟ್ 22 ರಿಂದ 31 ರವರೆಗೆ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ
WhatsApp Group Join Now
Telegram Group Join Now

ಬೆಳಗಾವಿ: 2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯನ್ನು ಆಗಸ್ಟ್ 22 ರಿಂದ ಆಗಸ್ಟ್ 31, 2024 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ.

ರ್ಯಾಲಿಗೆ ಆಯ್ಕೆಯಾದ ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಪತ್ರವನ್ನು ಅಭ್ಯರ್ಥಿಗಳ ಇಮೇಲ್‍ಗೆ ರವಾನಿಸಲಾಗಿದೆ ಎಂದು ಮಂಗಳೂರಿನ ಸೇನಾ ನೇಮಕಾತಿ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-220925 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು (ಪ್ರಭಾರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article