Ad imageAd image

ಲಾಲ್ ಬಾಗ್ ಪ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ, ಅಂಬೇಡ್ಕರ್ ಮೊಮ್ಮಗ ಭಾಗಿ

ratnakar
ಲಾಲ್ ಬಾಗ್ ಪ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ, ಅಂಬೇಡ್ಕರ್ ಮೊಮ್ಮಗ ಭಾಗಿ
WhatsApp Group Join Now
Telegram Group Join Now

ಸಸ್ಯಕಾಶಿ ಲಾಲ್ ಬಾಗ್ ನಲ್ಲಿ‌ ಇಂದಿನಿಂದ ಫ್ಲವರ್ ಶೋ ಆರಂಭವಾಗುತ್ತಿದ್ದು, ಆಗಸ್ಟ್​ 19ರ ವರೆಗೆ ಫ್ಲವರ್ ಶೋ ಇರಲಿದೆ. 216ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ತೋಟಗಾರಿಕೆ ಇಲಾಖೆ ವತಿಯಿಂದ ಈ ಬಾರಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿಷಯಾಧಾರಿತವಾಗಿ ಫ್ಲವರ್​ಶೋ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಫ್ಲವರ್​ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೊಮ್ಮಗ ಯಶವಂತ್ ಅಂಬೇಡ್ಕರ್ ಅವರು ಕೂಡ ಭಾಗಿಯಾಗಿದ್ದಾರೆ.

ಈ ವರ್ಷ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರ ಕಾನ್ಸೆಪ್ಟ್ ನಲ್ಲಿ ಫ್ಲವರ್ ಶೋ ಮೂಡಿಬಂದಿದ್ದು, ಆಗಸ್ಟ್ 19ರವರೆಗೂ ನಲ್ಲಿ ಫ್ಲವರ್ ಶೋ ಇರಲಿದೆ. ಸಂಸತ್, ಭೀಮ ಸ್ಮರಾಕ, ಅಂಬೇಡ್ಕರ್ ಅವರು ಹುಟ್ಟಿದ ಜಾಗ, ಅವರು ಹುಟ್ಟಿ ಬೆಳೆದು ಬಂದಂತಹ ಹಾದಿ ಹೇಗಿತ್ತು ಎನ್ನುವುದು ಪ್ಲವರ್ ಶೋ ನ ಪ್ರಮುಖ ಆಕರ್ಷಣೆಗಳಾಗಿವೆ.‌

ಪ್ಲವರ್ ಶೋ‌ನಲ್ಲಿ 200 ಕ್ಕು ಹೆಚ್ಚು ಬಗೆಯ ಹೂಗಳು ಒಂದೇ ಸ್ಥಳದಲ್ಲಿ ಜನರನ್ನ ಮೋಡಿ ಮಾಡುತ್ತಿದ್ದು, ಒಟ್ಟು 35 ಲಕ್ಷ ಹೂಗಳನ್ನ ಪ್ಲವರ್ ಶೋಗೆ ಬಳಕೆ ಮಾಡಿಕೊಳ್ಳಲಾಗಿದೆ. ಇನ್ನು ಫ್ಲವರ್ ಶೋಗೆಂದೆ ಆಂಧ್ರ, ಊಟಿ, ತಮಿಳುನಾಡು ಸೇರಿದಂತೆ ಬೇರೆ ಬೇರೆ ಭಾಗದಿಂದ ಹೂಗಳು ಬಂದಿದ್ದು, ಲಾಲ್ ಬಾಗ್​ನ ಗಾಜಿನ ಮನೆಯಲ್ಲಿ ಮೋಡಿ ಮಾಡಿವೆ.

WhatsApp Group Join Now
Telegram Group Join Now
Share This Article