ಬೆಂಗಳೂರು: 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. 8.7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಈ ಕುರಿತು ಮಲ್ಲೇಶ್ವರಂನಲ್ಲಿರುವಂತ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಬಿಡುಗಡೆ ಮಾಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದರು.
ಈ ಭಾರಿ ಕಳೆದ 10 ವರ್ಷಗಳಲ್ಲಿಯೇ ಅಧಿಕ ಫಲಿತಾಂಶ ಈ ವರ್ಷ ಬಂದಿದೆ. 90.29 ರಷ್ಟು ವಿದ್ಯಾರ್ಥಿನಿಯರು ಪಾಸಾಗಿದ್ದಾರೆ. ಶೇ.81.3ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.
ಫಲಿತಾಂಶವನ್ನು ವಿದ್ಯಾರ್ಥಿಗಳು karresults.nic.in ಮತ್ತು sslc.karnataka.gov.in ನಲ್ಲಿ ಭೇಟಿ ನೀಡಿ, ನೋಂದಣಿ ಸಂಖ್ಯೆ ನೀಡಿ ವೀಕ್ಷಿಸಬಹುದಾಗಿ ಎಂದು ತಿಳಿಸಿದರು. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದಿದ್ದಾರೆ. ಇನ್ನು ವಿಜಯಪುರ ಗ್ರಾಮೀಣ ಭಾಗದ ಅಮಿತ್ ಮಾದರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ತುಮಕೂರಿನ ಭೂಮಿಕಾ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾವೇರಿ ಜಿಲ್ಲೆಯ ಪ್ರವೀಣ್ ನೇರಲಗಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ.