spot_img
spot_img
spot_img
18.5 C
Belagavi
Thursday, September 29, 2022
spot_img

ಗೋಕಾಕ : ಚಾಕುವಿನಿಂದ ಇರಿದು ತಮ್ಮನನ್ನೇ ಕೊಂದ ಅಣ್ಣ

spot_img

ಬೆಳಗಾವಿ: ಚಾಕುವಿನಿಂದ ಇರಿದು ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಮುನಾಫ್ ದೇಸಾಯಿ (24) ಕೊಲೆಯಾದ ದುರ್ದೈವಿ, ರಮಜಾನ್ (26) ತಮ್ಮನನ್ನ ಕೊಲೆ ಮಾಡಿದ ಸಹೋದರನಾಗಿದ್ದಾನೆ.

ನಿನ್ನೆ ಮನೆಯಲ್ಲಿ ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಪೋಷಕರನ್ನು ಮುನಾಫ್ ಬೈಯ್ಯುತ್ತಿದ್ದನಂತೆ. ಇದನ್ನು ಕಂಡ ರಮಜಾನ್, ತಂದೆ ತಾಯಿಯನ್ನು ಯಾಕೆ ಬೈಯ್ತಿಯಾ ಅಂತ ಪ್ರಶ್ನೆ ಮಾಡಿದ್ದಾನೆ.

ಈ ವೇಳೆ ಇಬ್ಬರ ನಡುವೆಯೂ ವಾಗ್ವಾದ ತಾರಕಕ್ಕೇರಿದೆ. ಈ ವೇಳೆ ಅಣ್ಣ ಮನೆಯಲ್ಲಿದ್ದ ಚಾಕುವಿನಿಂದ ತಮ್ಮ ಮುನಾಫ್ ಹೊಟ್ಟೆಗೆ ಇರಿದು ಕೊಲೆ ಮಾಡಿದ್ದಾನೆ.

ತೀವ್ರ ಗಾಯಗೊಂಡ ಮುನಾಫ್​​​ನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಯತ್ನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಗೋಕಾಕ್ ನಗರದ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -