ವಿಜಯಪುರ : ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ನಿಲ್ಲುವುದಿಲ್ಲ ಎಂದು ಆಹಾರ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ 10 ಕೆಜಿ ಪಡಿತರ ಅಕ್ಕಿ ವಿತರಿಸುತ್ತಿದೆ. ಅಕ್ಕಿ ಜೊತೆಗೆ ಜೋಳ ಮತ್ತು ರಾಗಿಯನ್ನೂ ನೀಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆಯನ್ನು ಕೈಬಿಡುವುದಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮ್ಯನವರು ಮತ್ತೆ ಮುಖ್ಯಮಂತ್ರಿ ಆದರೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದರು.