ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಭಾಜನರಾಗಿದ್ದಾರೆ.
ಬೆಂಗಳೂರು ವಿವಿಯ 58ನೇ ಘಟಿಕೋತ್ಸವದ ಹಿನ್ನೆಲೆಯಲ್ಲಿ ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ.