spot_img
22.9 C
Belagavi
Saturday, December 3, 2022
spot_img

ಪೇ-ಸಿಎಂ ಬಳಿಕ ಕಾಂಗ್ರೆಸ್ ನಿಂದ ಮತ್ತೊಂದು ಪೋಸ್ಟರ್ ಬಿಡುಗಡೆ 

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ಅಭಿಯಾನ ನಡೆಸಿದೆ. 40% ಕಮಿಷನ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ರೋಡಲ್ಲಿ ಯಮಗುಂಡಿ, ಬಿದ್ರೆ ಜೀವನ ಬಂಡಿ ಪೋಸ್ಟರ್ ಬಿಡುಗಡೆ ಮಾಡಿದ್ದು, ಪೋಸ್ಟರ್ ನಲ್ಲಿ ಸಿಎಂ ಯಮನಂತೆ ಬಿಂಬಿಸಿದೆ. ಈ ಮೂಲಕ ವಿವಿಧ ಚಿತ್ರಗಳ ಮೂಲಕ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಅಭಿಯಾನ ನಡೆಸಿದೆ.

ಮತ್ತೊಂದು ಪೋಸ್ಟರ್ ನಲ್ಲಿ ಕಿಲಾಡಿ ಜೋಡಿ ಎಂದು ಬೊಮ್ಮಾಯಿ ಹಾಗೂ ಸಚಿವ ಅಶ್ವತ್ಥನಾರಾಯಣ ಅವರ ಪೋಸ್ಟರ್, ಸರ್ವರ್ ಸೋಮಣ್ಣ ಹೆಸರಲ್ಲಿ ಸಚಿವ ಸೋಮಣ್ಣ, ಚಪಲ ಚನ್ನಿಗರಾಯ ಎಂದು ರಮೇಶ್ ಜಾರಕಿಹೊಳಿ ಪೋಸ್ಟರ್, ಅಡುಗೆ ಭಟ್ಟರಂತೆ ಸಚಿವ ಬಿ.ಸಿ.ನಾಗೇಶ್ ಪೋಸ್ಟರ್ ಪ್ರಕಟಿಸಿದೆ. ಈ ಮೂಲಕ ಕಾಂಗ್ರೆಸ್ ವಿಭಿನ್ನ ರೀತಿಯ ಪೋಸ್ಟರ್ ಅಭಿಯಾನದ ಮೂಲಕ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಅಣಕವಾಡಿದೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -